


ಮಡಿಕೇರಿ ಮಾ.17 NEWS DESK : ವಿವಿಧ ಬೇಡಿಕೆಗಳನ್ನು ಈಡೇಸುವಂತೆ ವಿರಾಜಪೇಟೆ ಪುರಸಭೆಯ ಗುತ್ತಿಗೆ ನೌಕರರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿದ್ದಾರೆ. ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪುರಸಭೆ ಸದಸ್ಯ ಪಟ್ಟಡ ರಂಜಿ ಪೂಣ್ಣಚ್ಚ ಅವರ ನೇತೃತ್ವದಲ್ಲಿ, ಶಾಸಕರ ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿದ ಪುರಸಭೆ ಪೌರಕಾರ್ಮಿಕರು, ಪುರಸಭೆ ಪೌರಕಾರ್ಮಿಕರ ಹಲವು ಬೇಡಿಕೆಗಳ ಮನವಿ ಪತ್ರವನ್ನು ಶಾಸಕರಿಗೆ ಸಲ್ಲಿಸಿ, ತಮ್ಮ ಬೇಡಿಕೆಗಳನ್ನು ಶೀಘ್ರ ಬಗೆಹರಿಸುವಂತೆ ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಶಾಸಕರು, ಕಾರ್ಮಿಕರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.