


ಮಡಿಕೇರಿ NEWS DESK ಮಾ.17 : ಮಡಿಕೇರಿ ನಗರದ ಅಶೋಕಪುರದ ಡಾ.ಅಂಬೇಡ್ಕರ್ ಭವನದ ಸಮೀಪ ಮಾ.19ರಂದು ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಭೂಮಿಪೂಜೆ ನೆರವೇರಲಿದೆ. ಡಾ.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸಮಿತಿಯಿಂದ ಡಾ.ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣಗೊಳ್ಳಲಿದೆ. ಬುಧವಾರ ಬೆಳಿಗ್ಗೆ 10.30 ಗಂಟೆಗೆ ಡಾ.ಅಂಬೇಡ್ಕರ್ ಭವನ ಸಮಿತಿಯ ಅಧ್ಯಕ್ಷ ಹೆಚ್.ಎಂ.ನಂದಕುಮಾರ್ ಅವರ ಅಧ್ಯಕ್ಷತೆಯಲ್ಲಿ ಬೌದ್ಧ ಧರ್ಮದ ಆಚರಣೆಯಂತೆ ಗುರುಗಳಾದ ಸುಗಥಪಾಲ ಭಾಂತೇಜಿ ಅವರು ಭೂಮಿಪೂಜೆ ನೆರವೇರಿಸಲಿದ್ದಾರೆ. ಡಾ.ಅಂಬೇಡ್ಕರ್ ಅವರ ಅಭಿಮಾನಿಗಳು, ಅನುಯಾಯಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದೆ.