



ಮಡಿಕೇರಿ ಮಾ.18 NEWS DESK : ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾ.21 ರಂದು ತಲಕಾವೇರಿಗೆ ಭೇಟಿ ನೀಡಲಿದ್ದಾರೆ. ಅಂದು ಬೆಳಿಗ್ಗೆ 8 ಗಂಟೆಗೆ ತಲಕಾವೇರಿ ಸನ್ನಿಧಿಗೆ ಆಗಮಿಸಲಿದ್ದಾರೆ. ಉಪ ಮುಖ್ಯಮಂತ್ರಿಗಳೊಂದಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಹಾಗೂ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರಾದ ಶ್ರೀ ಎ.ಎಸ್ ಪೊನ್ನಣ್ಣ ರವರು ಹಾಗು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭಾಗವಹಿಸಲಿದ್ದಾರೆ. ಕಾವೇರಿ ಆರತಿ ಕಾರ್ಯಕ್ರಮದ ಅಂಗವಾಗಿ ಕಾವೇರಿ ತಾಯಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ, ತಾಯಿ ಕಾವೇರಿಯ ಪವಿತ್ರ ತೀರ್ಥದೊಂದಿಗೆ ರಾಜಧಾನಿಗೆ ಮರಳಲಿದ್ದಾರೆ. ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.