


ಮಡಿಕೇರಿ NEWS DESK ಮಾ.18 : ವಿಧಾನಸಭೆಯ ಕಲಾಪಗಳ ಮಧ್ಯೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಮತ್ತು ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದರು. ವಿವಿಧ ಇಲಾಖೆಗಳ ಸಚಿವರೊಂದಿಗೆ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸಿದರು. ಕೊಡಗು ಜಿಲ್ಲೆಗೆ ಬೇಕಾದ ವಿವಿಧ ಇಲಾಖೆಗಳ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದರು.