



ಮಡಿಕೇರಿ ಮಾ.18 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ವಿಶೇಷ ಪ್ರಯತ್ನದಿಂದಾಗಿ ಭಾಗಮಂಡಲ-ಕರಿಕೆಗೆ ತೆರಳುವ ಮಾರ್ಗದ ಆಯ್ದ ಭಾಗಗಳಲ್ಲಿ S-ತಿರುವಿನಿಂದ ಆರಂಭಗೊಂಡು ಸುಮಾರು 7 ಕಿ.ಮೀ ನಷ್ಟು ರಸ್ತೆಯ ಪುನರ್ ನಿರ್ಮಾಣ ಕಾಮಗಾರಿಯನ್ನು, ರಾಜ್ಯ ಹೆದ್ದಾರಿ ಪ್ರಾಧಿಕಾರದ ಅಭಿವೃದ್ಧಿ ಕಾರ್ಯಕ್ರಮದ (SHDP) ಅಡಿಯಲ್ಲಿ ಕೈಗೊಳ್ಳಲಾಗಿದ್ದು, ಕಾಮಗಾರಿಯು ಈಗಾಗಲೇ ಆರಂಭಗೊಂಡಿದೆ. ಅತಿ ಶೀಘ್ರದಲ್ಲಿ ಮುಕ್ತಾಯವಾಗಿ ಈ ಭಾಗದಲ್ಲಿ ಓಡಾಡುವ ವಾಹನ ಸವಾರರಿಗೂ ಹಾಗೂ ಸಾರ್ವಜನಿಕರಿಗೂ ಅನುಕೂಲ ಆಗಲಿದೆ ಎಂದು ಸ್ಥಳೀಯರು ಪ್ರಸಂಶೆ ವ್ಯಕ್ತಪಡಿಸಿದ್ದಾರೆ.