



ವಿರಾಜಪೇಟೆ ಮಾ.19 NEWS DESK : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೊಡವ ಕೂಟಾಳಿಯಡ ಕೂಟದಿಂದ ಬಾಸ್ಕೆಟ್ ಬಾಲ್ ಆಟಗಾರ್ತಿ ಚೋವಂಡ ಜಮುನಾ ಸುರೇಶ್ ಅವರನ್ನು ಸನ್ಮಾನಿಸಲಾಯಿತು. ಗೃಹಿಣಿಯಾಗಿ, ಹಾಡುಗಾರ್ತಿಯಾಗಿ, ಕರಕುಶಲತೆಯ ಜೊತೆಗೆ, ಹೊರ ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಬಾಸ್ಕೆಟ್ ಬಾಲ್ ಆಟಗಾರ್ತಿಯಾಗಿ ಗುರುತಿಸಿ ಕೊಂಡಿರುವ ಜಮುನಾ ಸುರೇಶ್ ಅವರನ್ನು ಕೂಟದ ಪ್ರಮುಖರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಮಾತನಾಡಿದ ಜಮುನಾ, ಇದು ನನಗೆ ವಿಶೇಷ ಸನ್ಮಾನವಾಗಿದ್ದು, ಕೊಡವಾಮೆಯನ್ನು ಉಳಿಸುವ ಸಲುವಾಗಿ ಹಲವಾರು ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿರುವ ಕೊಡವ ಕೂಟಾಳಿಯಡ ಕೂಟ ನನ್ನನ್ನು ಗುರುತಿಸಿ ಮನೆಗೆ ಬಂದು ಗೌರವಿಸಿ ಸನ್ಮಾನ ಮಾಡಿರುವುದು ನನಗೆ ತುಂಬಾ ಸಂತೋಷವನ್ನು ತಂದಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕೂಟದ ಅಧ್ಯಕ್ಷ ಚೆಟ್ಟೋಳಿರ ಶರತ್ ಸೋಮಣ್ಣ, ಕಾರ್ಯದರ್ಶಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಸಂಸ್ಥಾಪಕಿ ಚಿಮ್ಮಚ್ಚಿರ ಪವಿತ ರಜನ್, ಖಜಾಂಚಿ ಬೊಜ್ಪಂಗಡ ಭವ್ಯ ದೇವಯ್ಯ ಮತ್ತು ಸದಸ್ಯೆ ಇಟ್ಟಿರ ಭವ್ಯ ಈಶ್ವರ್ ಪಾಲ್ಗೊಂಡಿದ್ದರು.