



ನಾಪೋಕ್ಲು ಮಾ.19 NEWS DESK : ಸಂಘ ಸಂಸ್ಥೆಯಲ್ಲಿ ಪ್ರತಿಯೊಬ್ಬ ಸದಸ್ಯರು ಸದೃಢ ಕಟ್ಟಡದ ಒಂದೊಂದು ಕಂಬಗಳಿದಂತೆ ಆದುದರಿಂದ ಪ್ರತಿಯೊಬ್ಬ ಸದಸ್ಯರ ಸಹಭಾಗಿತ್ವ ಮುಖ್ಯ ಎಂದು ಕೊಡಗು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಆಮೆ ದಮಯಂತಿ ಹೇಳಿದರು. ಚೇರಂಬಾಣೆ ಗೌಡ ಸಮಾಜದ ಸಭಾಂಗಣದಲ್ಲಿ ಆಯೋಜಿಸಿದ ಚೇರಂಬಾಣೆ ಗೌಡ ಮಹಿಳಾ ನೂತನ ಒಕ್ಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬ ಮಹಿಳೆಯಲ್ಲಿ ವಿವಿಧ ಕಲಾ ಪ್ರತಿಭೆಗಳಿರುತ್ತವೆ. ಒಂದು ಕಡ್ಡಿಯಿಂದ ಕಸ ಗುಡಿಸಲಾಗದು ಒಗ್ಗಟ್ಟಿನಲ್ಲಿ ಬಲವಿದೆ ಸದಸ್ಯರ ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯಪ್ರವೃತ್ತರಾಗಬೇಕು ಎಂದರು. ಒಕ್ಕೂಟದ ಸದಸ್ಯತ್ವ ನೋಂದಣಿ ಪುಸ್ತಕವನ್ನು ಚೇರಂಬಾಣೆ ಗೌಡ ಸಮಾಜದ ನಿರ್ದೇಶಕರಾದ ನೆಯ್ಯಣಿ ಹೇಮಲತಾ ತಾರೆಂದ್ರ ಅನಾವರಣಗೊಳಿಸಿ ಮಾತನಾಡಿ, ಬಹಳ ವರ್ಷಗಳ ಮನವಿಯ ಫಲಶೃತಿಯಾಗಿ ನೂತನ ಒಕ್ಕೂಟ ರಚನೆಯಾಗಿದೆ. 16 ಗಾಮಗಳ ಸಮ್ಮಿಲನ ಈ ಒಕ್ಕೂಟವಾಗಿದ್ದು, ಉತ್ತಮ ಕಾರ್ಯ ಚಟುವಟಿಕೆಗಳ ಮೂಲಕ ಪ್ರಗತಿ ಕಾಣಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮವನ್ನು ಬೈಮನ ಅನುಜಾ ಹರೀಶ್ ಉದ್ಘಾಟಿಸಿ ನೂತನ ಒಕ್ಕೂಟಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಚೆರಂಬಾಣೆ ವ್ಯಾಪ್ತಿಗೆ ಬರುವ ಎಲೆ ಮರೆಯಲ್ಲಿರುವ ವಿವಿಧ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಒಕ್ಕೂಟದ ಮೂಲಕ ವೇದಿಕೆ ಕಲ್ಪಿಸಿ ಕೊಡಲಾಗುವುದು, ತರಬೇತಿ ಶಿಬಿರಗಳು ಸೇರಿದಂತೆ ಸಮಾಜಮುಖಿ ಕಾರ್ಯಗಳೊಂದಿಗೆ ಒಕ್ಕೂಟವನ್ನು ನಡೆಸಲಾಗುವುದು. ಆದುದರಿಂದ ಸರ್ವರೂ ಸಮಾನ ಮನಸ್ಕರಾಗಿ ಶ್ರಮಿಸಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಉಪಾಧ್ಯಕ್ಷ ಹೊಸೊಕ್ಲು ಲತಾ ಮೊಣ್ಣಪ್ಪ ಸೇರಿದಂತೆ ಮಹಿಳೆಯರು ಭಾಗವಹಿಸಿದ್ದರು. ಇದೇ ಸಂದರ್ಭ ನೂತನ ಒಕ್ಕೂಟದ ಸಮಿತಿ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಯಿತು. ಕಾಳೇರಮ್ಮನ ರಶಿ ಅಶೋಕ್ ಪ್ರಾರ್ಥಿಸಿದರು, ಕಾರ್ಯದರ್ಶಿ ಕೇಕಡ ಪೂಜಾ ನಾಗೇಂದ್ರ ಸ್ವಾಗತಿಸಿದರು. ಬೈಮನ ಜ್ಯೋತಿ ತಿಮ್ಮಯ್ಯ ಕಾರ್ಯಕ್ರಮ ನಿರೂಪಿಸಿದರು, ಕೊಡಪಾಲು ತೀರ್ಥ ಗಣಪತಿ ವಂದಿಸಿದರು
ವರದಿ : ದುಗ್ಗಳ ಸದಾನಂದ.