Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ರಾಜ್ಯಮಟ್ಟದ ಅಂತರ್ ಕಾಲೇಜು ಅಥ್ಲೆಟಿಕ್ಸ್ ಸ್ಪರ್ಧೆ : ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಮಹಿಳೆಯರ ತಂಡಕ್ಕೆ ರನ್ನರ್ ಅಪ್ ಟ್ರೋಫಿ
ಇತ್ತೀಚಿನ ಸುದ್ದಿಗಳು ಕರ್ನಾಟಕ

ರಾಜ್ಯಮಟ್ಟದ ಅಂತರ್ ಕಾಲೇಜು ಅಥ್ಲೆಟಿಕ್ಸ್ ಸ್ಪರ್ಧೆ : ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಮಹಿಳೆಯರ ತಂಡಕ್ಕೆ ರನ್ನರ್ ಅಪ್ ಟ್ರೋಫಿ

ಮಾರ್ಚ್ 19, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು ಮಾ.19 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ರಾಜ್ಯಮಟ್ಟದ 26ನೇ ಅಂತರ್ ಕಾಲೇಜು ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಮಹಿಳೆಯರ ವಿಭಾಗದ ಚಾಂಪಿಯನ್‍ಶಿಪ್‍ನಲ್ಲಿ ರನ್ನರ್ ಅಪ್ ಟ್ರೋಫಿಯನ್ನು ಗೆದ್ದುಕೊಂಡಿದ್ದಾರೆ. ಶಿವಮೊಗ್ಗದ ಜವಾಹರ್‍ಲಾಲ್ ನೆಹರೂ ಇಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ಮಾರ್ಚ್ 15 ರಿಂದ 18ರ ವರೆಗೆ ನಡೆದ ಈ ಕ್ರೀಡಾಕೂಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಸಂಯೋಜನೆಗೊಳಪಟ್ಟ 126 ಕ್ಕೂ ಹೆಚ್ಚು ಎಂಜಿನಿಯರಿಂಗ್ ಕಾಲೇಜುಗಳ 1434 ಕ್ರೀಡಾಪಟುಗಳು ಭಾಗವಹಿಸಿದ್ದರು. ಕ್ರಿಡಾಕೂಟದ ಉದ್ಘಾಟನಾ ಸಮಾರಂಭದದಲ್ಲಿ ನಡೆದ ಆಕರ್ಷಕ ಪಥ ಸಂಚಲನದಲ್ಲಿ ವಿದ್ಯಾರ್ಥಿಗಳು ತೃತೀಯ ಸ್ಥಾನವನ್ನು ಗಳಿಸಿಕೊಂಡಿದ್ದಾರೆ. ಮಹಿಳೆಯರ ವಿಭಾಗದಲ್ಲಿ ಪ್ರಥಮ ವರ್ಷದ ಮೆಕ್ಯಾನಿಕಲ್ ವಿಭಾಗದ ಅನಘಾ.ಕೆ.ಎನ್ 200ಮೀ ಹಾಗೂ 400 ಮೀ ಓಟದಲ್ಲಿ ಚಿನ್ನ, 4×100ಮೀ ರಿಲೇಯಲ್ಲಿ ಬೆಳ್ಳಿ, 4×400ಮೀ ಮಿಕ್ಸೆಡ್ ರಿಲೇಯಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಅರ್ಪಿತಾ ಬಾಲಚಂದ್ರ ನಾಯ್ಕ್ 400ಮೀ ಹರ್ಡಲ್ಸ್‍ನಲ್ಲಿ ಬೆಳ್ಳಿ, 4×400ಮೀ ರಿಲೇಯಲ್ಲಿ ಬೆಳ್ಳಿ ಹಾಗೂ ಹಾಗೂ ಟ್ರಿಪಲ್ ಜಂಪ್‍ನಲ್ಲಿ ಕಂಚಿನ ಪದಕ . ಅಂತಿಮ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾರ್ಥಿನಿ ವಿದ್ಯಾ ಸಿ ಎಸ್ 20ಕಿಮೀ ನಡಿಗೆಯಲ್ಲಿ ಬೆಳ್ಳಿಯ ಪದಕ, ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವರ್ಷಿತಾ.ಪಿ.ಆಳ್ವ ಜಾವೆಲಿನ್ ಥ್ರೋನಲ್ಲಿ ಬೆಳ್ಳಿಯ ಪದಕ, ತೃತೀಯ ವರ್ಷದ ಎಐಎಂಎಲ್ ವಿಭಾಗದ ಚೈತನ್ಯ.ಎ.ಎನ್ 100ಮೀ ಹರ್ಡಲ್ಸ್‍ನಲ್ಲಿ ಬೆಳ್ಳಿ ಮತ್ತು 4×100ಮೀ ರಿಲೇಯಲ್ಲಿ ಬೆಳ್ಳಿ, ಪ್ರಥಮ ವರ್ಷದ ಸಿವಿಲ್ ವಿಭಾಗದ ಶುಭಶ್ರೀ.ಬಿ.ಎಸ್ 4×100ಮೀ ರಿಲೇಯಲ್ಲಿ ಬೆಳ್ಳಿ, ದ್ವಿತೀಯ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದ ಪೂಜಾಶ್ರೀ 4×100ಮೀ ರಿಲೇಯಲ್ಲಿ ಬೆಳ್ಳಿ ಹಾಗೂ ಹೆಪ್ಟತ್ಲಾನ್‍ನಲ್ಲಿ ಕಂಚಿನ ಪದಕ, ತೃತೀಯ ವರ್ಷದ ಡಾಟಾ ಸೈನ್ಸ್ ವಿಭಾಗದ ಅಶ್ವಿನಿ 4×400ಮೀ ರಿಲೇಯಲ್ಲಿ ಬೆಳ್ಳಿ ಹಾಗೂ 4×400ಮೀ ಮಿಕ್ಸೆಡ್ ರಿಲೇಯಲ್ಲಿ ಕಂಚು, ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಬಿಂದುಶ್ರೀ.ಎಚ್.ರೈ 4×400ಮೀ ರಿಲೇಯಲ್ಲಿ ಬೆಳ್ಳಿ, ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಜೀಕ್ಷಿತಾ.ಕೆ 4×400ಮೀ ರಿಲೇಯಲ್ಲಿ ಬೆಳ್ಳಿ, ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಸಿಂಚನ.ವಿ.ಎಸ್ ಪೋಲ್‍ವಾಲ್ಟ್‍ನಲ್ಲಿ ಕಂಚು ಹಾಗೂ 100ಮೀ ಹರ್ಡಲ್ಸ್‍ನಲ್ಲಿ ಕಂಚಿನ ಪದಕದ ಸಾಧನೆಯನ್ನು ಮಾಡಿದ್ದಾರೆ. ಪುರುಷರ ವಿಭಾಗದಲ್ಲಿ ::  ಅಂತಿಮ ವರ್ಷದ ಎಐಎಂಎಲ್ ವಿಭಾಗದ ಅನ್ವಿತ್.ಬಿ.ಎಂ 20 ಕಿ.ಮೀ ನಡಿಗೆ ಸ್ಪರ್ಧೆಯಲ್ಲಿ ಚಿನ್ನ, ದ್ವಿತೀಯ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದ ನಂದೀಶ್.ಬಿ.ಟಿ 400ಮೀ ಹರ್ಡಲ್ಸ್‍ನಲ್ಲಿ ಬೆಳ್ಳಿ ಹಾಗೂ 4×400ಮೀ ಮಿಕ್ಸೆಡ್ ರಿಲೇಯಲ್ಲಿ ಕಂಚು, ತೃತೀಯ ಎಲೆಕ್ಟ್ರಾನಿಕ್ಸ್ ವಿಭಾಗದ ಸನ್ಮಿತ್ 110ಮೀ ಹರ್ಡಲ್ಸ್‍ನಲ್ಲಿ ಕಂಚು ಹಾಗೂ 4×100ಮೀ ರಿಲೇಯಲ್ಲಿ ಕಂಚು, ಪ್ರಥಮ ವರ್ಷದ ಎಂಬಿಎ ವಿಭಾಗದ ಸುಮಂತ್.ಎಚ್.ಎಲ್ 800 ಮೀ ಓಟದಲ್ಲಿ ಕಂಚು, ಅಂತಿಮ ವರ್ಷದ ಮೆಕ್ಯಾನಿಕಲ್ ವಿಭಾಗದ ಅಜಿತ್ ಕುಮಾರ್.ಎಂ 20 ಕಿಮೀ ನಡಿಗೆ ಸ್ಪರ್ಧೆಯಲ್ಲಿ ಕಂಚು, ಅಂತಿಮ ವರ್ಷದ ಎಐಎಂಎಲ್ ವಿಭಾಗದ ಜಗದೀಶ್.ಕೆ 4×100ಮೀ ರಿಲೇಯಲ್ಲಿ ಕಂಚು, ತೃತೀಯ ವರ್ಷದ ಕಂಪ್ಯೂಟರ್ ವಿಭಾಗದ ಕಾರ್ತಿಕ್.ಆರ್ 4×100ಮೀ ರಿಲೇಯಲ್ಲಿ ಕಂಚು, ತೃತೀಯ ವರ್ಷದ ಮೆಕ್ಯಾನಿಕಲ್ ವಿಭಾಗದ ರಮಿತ್‍ರಾಜ್.ಎನ್.ಎಸ್ 4×100ಮೀ ರಿಲೇಯಲ್ಲಿ ಕಂಚು, ದ್ವಿತೀಯ ವರ್ಷದ ಡಾಟಾ ಸೈನ್ಸ್ ವಿಭಾಗದ ಭುವನ್ ಕುಮಾರ್.ಎ.ಸಿ ಲಾಂಗ್‍ಜಂಪ್‍ನಲ್ಲಿ ಕಂಚು, ತೃತೀಯ ವರ್ಷದ ಮೆಕ್ಯಾನಿಕಲ್ ವಿಭಾಗದ ಸಂಭ್ರಮ್ 4×400ಮೀ ಮಿಕ್ಸೆಡ್ ರಿಲೇಯಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಕಾಲೇಜಿನ ತಂಡಕ್ಕೆ ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ.ಬಾಲಚಂದ್ರ ಗೌಡ ಭಾರ್ತಿಕುಮೇರು ತರಬೇತಿಯನ್ನು ನೀಡಿದ್ದರು ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.16: ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ಪ್ರಯುಕ್ತ ಅಕ್ಟೋಬರ್ 18ರ ಭಾನುವಾರದಂದು ಘೋಷಿಸಲಾಗಿದ್ದ ಸ್ಥಳೀಯ…

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.