




ಮಡಿಕೇರಿ ಮಾ.19 NEWS DESK : ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ತರ ಯೋಜನೆ ಎಂದರೆ ಅದು “ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ”. ಗ್ರಾಮೀಣ ಭಾಗದ ಜನರ ಬದುಕಿಗೆ ಆಸರೆಯಾಗುವ ನಿಟ್ಟಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆ ಕಾರ್ಯನಿರ್ವಹಿಸುತ್ತ ಬಂದಿದೆ. ಕೊಡಗು ಜಿಲ್ಲೆಯಲ್ಲಿಯೂ ಸಹ ನರೇಗಾ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಗೊಳಿಸಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ನಿರಂತರ ಕೂಲಿ ಒದಗಿಸುವ ಜೊತೆಗೆ, ಗ್ರಾಮೀಣ ಜನರಿಗೆ ನೆರವಾಗಿದೆ ಎಂದು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಹೇಳಿದ್ದಾರೆ. ‘ಉದ್ಯೋಗ ಖಾತ್ರಿ’ ಹೆಸರು ಸೂಚಿಸುವಂತೆ ಈ ಯೋಜನೆ ಗ್ರಾಮೀಣ ಭಾಗದ ಕುಟುಂಬಕ್ಕೆ ಕನಿಷ್ಠ 100 ದಿನಗಳ ಉದ್ಯೋಗವನ್ನು ಖಾತರಿ ಪಡಿಸುತ್ತದೆ. ಜೊತೆಗೆ ದಿನಕ್ಕೆ ರೂ. 349 ಕೂಲಿಯನ್ನು ನೀಡುತ್ತಿದೆ. ಗ್ರಾಮಗಳ ಅಭಿವೃದ್ಧಿಗೆ ಯೋಜನೆಯು ಪೂರಕವಾಗುವಂತೆ ಕಾರ್ಯನಿರ್ವಹಿಸುತ್ತಿದ್ದು ಪ್ರಮುಖವಾಗಿ ರೈತರಿಗೆ ಉದ್ಯೋಗ ಖಾತ್ರಿ ಯೋಜನೆಯು ಸಹಕಾರಿಯಾಗಿದೆ. ಪ್ರಸ್ತುತ ಬೇಸಿಗೆ ಪ್ರಾರಂಭವಾಗಿದ್ದು ಗ್ರಾಮೀಣ ಜನರಿಗೆ ನಿರಂತರ ಉದ್ಯೋಗ ಕೊಡವ ನಿಟ್ಟಿನಲ್ಲಿ ಯೋಜನೆಯು ಸಹಕಾರಿಯಾಗಿದ್ದು, ಕೆಲಸಕ್ಕಾಗಿ ಹತ್ತಿರದ ಗ್ರಾಮ ಪಂಚಾಯಿತಿ ಸಂಪರ್ಕಿಸಬಹುದಾಗಿದೆ ಎಂದು ಅವರು ಹೇಳಿದರು. ಉದ್ಯೋಗ ಖಾತ್ರಿ ನೋಂದಣಿ: ನರೇಗಾ ಯೋಜನೆಯಲ್ಲಿ ನೋಂದಣಿ ಮಾಡಿಕೊಳ್ಳಲು ತಮ್ಮ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ-ಆಧಾರ್ ಕಾರ್ಡ್ ಪ್ರತಿ, ರೇಷನ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕ ಪ್ರತಿ ಹಾಗೂ 2 ಪೆÇೀಟೊಗಳನ್ನು ನೀಡಿ ಉದ್ಯೋಗ ಚೀಟಿ ಪಡೆದುಕೊಳ್ಳಬಹುದಾಗಿದೆ. ವಿಶೇಷ ಚೇತನರು, ಹಿರಿಯ ನಾಗರಿಕರಿಗೆ ಕೆಲಸದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗಿದ್ದು, ಅರ್ಧ ಕೆಲಸಕ್ಕೆ ಪೂರ್ತಿ ಕೂಲಿಯನ್ನು ಪಡೆಯಬಹುದಾಗಿದೆ. ಉದ್ಯೋಗ ಚೀಟಿ ಪಡೆದುಕೊಂಡ ನಂತರದಲ್ಲಿ ಕೆಲಸಕ್ಕಾಗಿ ನಮೂನೆ-6 ರಲ್ಲಿ ಗ್ರಾಮ ಪಂಚಾಯಿತಿಗೆ ಕೆಲಸದ ಬೇಡಿಕೆಯನ್ನು ಸಲ್ಲಿಸಬಹುದಾಗಿದೆ. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ಉದ್ಯೋಗದ ಜೊತೆಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಕುಟುಂಬಗಳಿಗೆ ಹಲವಾರು ವೈಯಕ್ತಿಕ ಸೌಲಭ್ಯ ನೀಡಲಾಗುತ್ತಿದೆ. ಯೋಜನೆಯಡಿ ನೋಂದಾಯಿತವಾದ ಒಂದು ಅರ್ಹ ಕುಟುಂಬವು ತನ್ನ ಜೀವಿತಾವಧಿಯಲ್ಲಿ ಗರಿಷ್ಟ ರೂ.5 ಲಕ್ಷಗಳವರೆಗೆ ಯೋಜನೆಯಡಿ ನೀಡಲಾಗುವ ವೈಯಕ್ತಿಕ ಕಾಮಗಾರಿ ಪಡೆದುಕೊಳ್ಳಬಹುದಾಗಿದೆ. ಆ ದಿಸೆಯಲ್ಲಿ ದನದ ಕೊಟ್ಟಿಗೆ–4 ದನಗಳಿಗೆ-57 ಸಾವಿರ, ಕುರಿ/ ಮೇಕೆ ಕೊಟ್ಟಿಗೆ-70 ಸಾವಿರ, ಕೋಳಿ ಶೇಡ್ ನಿರ್ಮಾಣಕ್ಕೆ 60 ಸಾವಿರ, ಬಚ್ಚಲು ಗುಂಡಿ nimAFNkfke –11 ಸಾವಿರ, ಕೊಳವೆ ಬಾವಿ ಮರುಪೂರಕ ಘಟಕ-45 ಸಾವಿರ, ಎರೆಹುಳ ಘಟಕ-20 ಸಾವಿರ, ತೆರೆದ ಬಾವಿ-(ಗರಿಷ್ಟ 62 ರಿಂಗ್ ಗಳಿಗೆ) 1.50 ಲಕ್ಷ, ಹಂದಿ ಕೊಟ್ಟಿಗೆ-57 ಸಾವಿರ, ಅಜೋಲಾ ಘಟಕ- 16 ಸಾವಿರ, ಕೃಷಿ ಹೊಂಡ ನಿರ್ಮಾಣ, ಕಂದಕ ಬದು ನಿರ್ಮಾಣ, ಕಾಳುಮೆಣಸು (1 ಎಕರೆ) 17 ಸಾವಿರ, ಕೈ ತೋಟ- 5,315, ಅಡಿಕೆ ಕೃಷಿ (1 ಎಕರೆ)-70,778, ಕಿತ್ತಳೆ ಕೃಷಿ- (1 ಎಕರೆ) -15 ಸಾವಿರ ವೈಯಕ್ತಿಕ ಕಾಮಗಾರಿ ಲಾಭ ಪಡೆಯಬಹುದು ಎಂದು ಜಿ.ಪಂ.ಸಿಇಒ ತಿಳಿಸಿದ್ದಾರೆ. ಪರಿಶಿಷ್ಠ ಜಾತಿ ಮತ್ತು ಪಂಗಡದವರು, ಅಲೆಮಾರಿ ಜನಾಂಗ, ಬುಡಕಟ್ಟು ಜನಾಂಗದವರು, ಸ್ತ್ರೀ ಪ್ರಧಾನ ಕುಟುಂಬಗಳು, ವಿಕಲಚೇತನ ಪ್ರಧಾನ ಕುಟುಂಬಗಳು, ಭೂ ಸುಧಾರಣಾ ಫಲಾನುಭವಿಗಳು, ಪ್ರಧಾನಮಂತ್ರಿ ಆವಾಸ್ ಯೋಜನೆ ಫಲಾನುಭವಿಗಳು, ಬಿಪಿಎಲ್ ಕುಟುಂಬಗಳು, ಸಣ್ಣ ಮತ್ತು ಅತೀ ಸಣ್ಣ ರೈತರು, ಅನುಸೂಚಿತ ಬುಡಕಟ್ಟುಗಳು ಮತ್ತು ಪಾರಂಪರಿಕ ಅರಣ್ಯವಾಸಿಗಳು ನರೇಗಾ ಯೋಜನೆಯ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಗ್ರಾಮ ಪಂಚಾಯಿತಿಗೆ ಭೇಟಿ ನೀಡಬಹುದಾಗಿದೆ. ಮಹಿಳಾ ಭಾಗವಹಿಸುವಿಕೆಗೆ ಒತ್ತು :: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯಲ್ಲಿ ಮಹಿಳೆ ಮತ್ತು ಪುರುಷರಿಗೆ ಸಮಾನ ವೇತನ ನೀಡಲಾಗುತ್ತದೆ. ಜೊತೆಗೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಜಿಲ್ಲೆಯಲ್ಲಿ ಶೇ.51.32 ರಷ್ಟು ಮಹಿಳೆಯರು ನರೇಗಾ ಯೋಜನೆಯಡಿ ತೊಡಗಿಸಿಕೊಂಡಿದ್ದು, ಮುಂದಿನ ಆರ್ಥಿಕ ವರ್ಷದಲ್ಲಿ ಶೇ.60 ರಷ್ಟು ಮಹಿಳಾ ಭಾಗವಹಿಸುವಿಕೆಯನ್ನು ನಿರೀಕ್ಷಿಸಲಾಗಿದೆ. ಸಹಾಯವಾಣಿ :: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪಂಚಮಿತ್ರ ಸಹಾಯವಾಣಿಯನ್ನು ಆರಂಭಿಸಿದೆ. ಕುಟುಂಬಕ್ಕೆ 100 ದಿನಗಳ ಅಕುಶಲ ಕೆಲಸದ ಬೇಡಿಕೆ ಸಲ್ಲಿಸಲು, ಕುಡಿಯುವ ನೀರಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ ಗ್ರಾಮ ಪಂಚಾಯಿತಿಯಲ್ಲಿ ಆಸ್ತಿ ತೆರಿಗೆ ಪಾವತಿ, ಇ-ಸ್ವತ್ತು ಸೇರಿದಂತೆ ಇಲಾಖೆಯ ಮಾಹಿತಿಗೆ ಉಚಿತ ಸಹಾಯವಾಣಿ ಸಂಖ್ಯೆ 8277506000 ಕರೆ ಮಾಡಬಹುದಾಗಿದೆ ಎಂದು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ.