




ನಾಪೋಕ್ಲು ಮಾ.19 NEWS DESK : ಕೊಳಕೇರಿ ಗ್ರಾಮದಲ್ಲಿರುವ ಬೊಮ್ಮಂಜಿಕೇರಿ ಶ್ರೀ ಭದ್ರಕಾಳಿ ದೇವಿಯ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಉತ್ಸವದ ಅಂಗವಾಗಿ ಪೋದ ಹಾಗೂ ಭದ್ರಕಾಳಿ ಮುಡಿ ಕೋಳ ನೆರವೇರಿತು. ಉತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಹಾಗೂ ಹರಕೆ ಕಾಣಿಕೆಗಳನ್ನು ಒಪ್ಪಿಸಿದರು. ಈ ಸಂದರ್ಭ ಉತ್ಸವದಲ್ಲಿ ದೇವಾಲಯದ ತಕ್ಕ ಮುಖ್ಯಸ್ಥರು, ಆಡಳಿತ ಮಂಡಳಿಯ ಪದಾಧಿಕಾರಿಗಳು, ವಿವಿಧ ಗ್ರಾಮದ ಗ್ರಾಮಸ್ಥರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ.