


ಮಡಿಕೇರಿ NEWS DESK ಮಾ.20 : ಕೊಡಗು ಪತ್ರಕತ೯ರ ಸಂಘ (ರಿ)ದ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ ಮತ್ತು ಪತ್ರಕತ೯ರ ಸಾಂಸ್ಕೖತಿಕ ಸಂಭ್ರಮವು ಮಾಚ್೯ 22 ರಂದು ಶನಿವಾರ ಮಡಿಕೇರಿಯಲ್ಲಿ ಆಯೋಜಿತವಾಗಿದೆ. ನಗರದ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಮಾಚ್೯ 22 ರಂದು ಶನಿವಾರ ಸಂಜೆ 6 ಗಂಟೆಗೆ ಆಯೋಜಿತ ಸಮಾರಂಭವನ್ನು ಜಿಲ್ಲಾ ಚೇಂಬರ್ ಆಫ್ ಕಾಮಸ್೯ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಉದ್ಘಾಟಿಸಲಿದ್ದು, ಸಂಘದ ಸ್ಕಿಕ್ಕರ್ ಗಳನ್ನು ಕೂಗ್೯ ಹೋಟೇಲ್ಸ್ , ರೆಸಾಟ್೯ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾಯ೯ಪ್ಪ ಬಿಡುಗಡೆಗೊಳಿಸಲಿದ್ದಾರೆ. ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್ ಮುಖ್ಯ ಭಾಷಣ ಮಾಡಲಿದ್ದಾರೆ. ಸಂಘದ ನಿಕಟಪೂವ೯ ಅಧ್ಯಕ್ಷ ಎಸ್.ವಿ.ಮುರಳೀಧರ್, ಸಂಘದ ಗೌರವ ಸಲಹೆಗಾರರಾದ ಟಿ.ಪಿ.ರಮೇಶ್, ಬಿ.ಜಿ.ಅನಂತಶಯನ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ಸಂಘದ ಕ್ಷೇಮಾಭಿವೖದ್ದಿ ಸಮಿತಿ ಅಧ್ಯಕ್ಷ ಜಿ.ವಿ.ರವಿಕುಮಾರ್, ಸಾಂಸ್ಕೖತಿಕ ಸಮಿತಿ ಸಂಚಾಲಕ ಉಜ್ವಲ್ ರಂಜಿತ್, ಸಂಘದ ನೂತನ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ ಉಪಸ್ಥಿತರಿರುತ್ತಾರೆ. ಸಂಘದ ವತಿಯಿಂದ ಆಯೋಜಿತ ಸಾಂಸ್ಕೖತಿಕ ಸಂಭ್ರಮ ಕಾಯ೯ಕ್ರಮದಲ್ಲಿ ವಿಶ್ವದಾಖಲೆ ಮಾಡಿರುವ ಮದೆನಾಡಿನ ಸಿಂಚನಾಳಿಂದ ಯೋಗ ಪ್ರದಶ೯ನ, ವಿಕ್ರಂ ಜಾದೂಗಾರ್ ಅವರಿಂದ ಜಾದೂ ಪ್ರದಶ೯ನ, ಜತೆಗೇ ಕೊಡಗು ಪತ್ರಕತ೯ರ ಸಂಘ (ರಿ) ದ ಸದಸ್ಯರು, ಕುಟುಂಬ ವಗ೯ದಿಂದ ಸಾಂಸ್ಕೖತಿಕ ಕಾಯ೯ಕ್ರಮಗಳು ಆಯೋಜಿಸಲ್ಪಿಟ್ಟಿವೆ ಎಂದು ಸಂಘದ ನೂತನ ಅಧ್ಯಕ್ಷ ಅನಿಲ್ ಹೆಚ್.ಟಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.