




ಮಡಿಕೇರಿ ಮಾ.20 NEWS DESK : ಬೇಟೋಳಿ ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯಿತಿ ವ್ಯಾಪ್ತಿಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಗ್ರಾ.ಪಂ ಕಚೇರಿ ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಗ್ರಾಮೀಣ ಮಟ್ಟದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ದುಡಿಯುತ್ತಿರುವ, ಶ್ರೀ ಕೃಷ್ಣದೇವರಾಜ ಒಡೆಯರ್ ಸದ್ಭಾವನ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಬೇಟೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷ ಎಂ.ಎಂ.ಇಸ್ಮಾಯಿಲ್,ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರು, ಗ್ರಾಮೀಣ ರತ್ನ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸೀತಾ, 36 ವರುಷಗಳ ಕಾಲ ಬೇಟೋಳಿ ಗ್ರಾ.ಪಂ ವ್ಯಾಪ್ತಿಯ ಆರೋಗ್ಯ ಸಹಾಯಕಿಯಾಗಿ ಉತ್ತಮ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಕೆ.ಕೆ.ರಮಿತಾ, ಬೇಟೋಳಿ ಗ್ರಾಮ ಪಂಚಾಯಿತಿಯ ಕರ ವಸೂಲಿಗಾರರಾಗಿ ಅತ್ಯುತ್ತಮ ಸೇವೆಗೆಯುತ್ತಿರುವ ಬಿ.ಎಸ್.ದಿನೇಶ್ ಹಾಗೂ ಡಾಟಾ ಎಂಟ್ರಿ ಆಪರೇಟರ್ ಆಗಿ ಅತ್ಯುತ್ತಮ ಸೇವೆಗೆಯುತ್ತಿರುವ ಕೆ.ಬಿ.ರಮ ಅವರನ್ನು ಪಂಚಾಯಿತಿ ಅಧ್ಯಕ್ಷ ಅಚ್ಚಪ್ಪಂಡ ಬೋಪಣ್ಣ, ಸದಸ್ಯರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಅಂಗನವಾಡಿ, ಆಶಾ, ಸಂಜೀವಿನಿ ಸಂಘದ ಪ್ರತಿನಿಧಿಗಳು ಹಾಜರಿದ್ದರು.