







ಮಡಿಕೇರಿ ಮಾ.20 NEWS DESK : ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಂಗೇರಿ-ನಾಪೋಕ್ಲ್ಲು ರಸ್ತೆಯಲ್ಲಿ ಗಾಂಜಾ ಮಾರಾಟ ಮತ್ತು ಸರಬರಾಜು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಜಿಲ್ಲಾ ಪೊಲಿಸರು ಬಂಧಿಸಿದ್ದಾರೆ. ಕುಂಜಿಲ ಗ್ರಾಮದ ನಿವಾಸಿ ಮೊಹಮ್ಮದ್ ಅಶ್ರಫ್ ಕೆ.ಯು.(37) ಹಾಗೂ ಅಯ್ಯಂಗೇರಿ ಗ್ರಾಮದ ನಿವಾಸಿ ಅಸ್ಕರ್ ಪಿ.ಕೆ. (24) ಬಂಧಿತ ಆರೋಪಿಗಳಾಗಿದ್ದು, ಇವರ ಬಳಿಯಲ್ಲಿದ್ದ 1 ಕೆ.ಜಿ 151 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಮಡಿಕೇರಿ ಉಪ ವಿಭಾಗದ ಡಿವೈಎಸ್‍ಪಿ ಸೂರಜ್.ಪಿ.ಎ., ಮಡಿಕೇರಿ ಗ್ರಾಮಾಂತರ ವೃತ್ತದ ಪ್ರಬಾರ ಸಿಪಿಐ ಅನೂಪ್ ಮಾದಪ್ಪ, ಭಾಗಮಂಡಲ ಪಿಎಸ್‍ಐ ಶೋಭಾ ಲಮಾಣಿ ಹಾಗೂ ಸಿಬ್ಬಂದಿಗಳು ಖಚಿತ ಮಾಹಿತಿ ಹಿನ್ನೆಲೆ ದಾಳಿ ನಡೆಸಿ ಆರೋಪಿಗಳನ್ನು ಮಾಲು ಸಹಿತ ವಶಕ್ಕೆ ಪಡೆದರು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.