







ಮಡಿಕೇರಿ ಮಾ.21 NEWS DESK : ಬೃಹತ್ ಜಲ ಸಂರಕ್ಷಣಾ ಅಭಿಯಾನದ ಪ್ರಯುಕ್ತ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗಮಂಡಲ-ತಲಕಾವೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಶ್ರೀ ಭಗಂಡೇಶ್ವರ ದೇಗುಲ ಹಾಗೂ ಕಾವೇರಿ, ಸುಜ್ಯೋತಿ, ಕನ್ನಿಕಾ ನದಿಗಳ ತ್ರಿವೇಣಿ ಸಂಗಮದಲ್ಲಿ ಪೂಜೆ ಸಲ್ಲಿಸಿ ಪವಿತ್ರ ತೀರ್ಥ ಸಂಗ್ರಹಿಸಿದರು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿಗೆ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಬಿಡಬ್ಲ್ಯೂಎಸ್ಎಸ್ ಬಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು. ಬೆಂಗಳೂರಿನಲ್ಲಿ ಇಂದು ಸಂಜೆ ನಡೆಯಲಿರುವ ‘ಕಾವೇರಿ ಆರತಿ’ಯ ಪುಣ್ಯ ಕಾರ್ಯಕ್ರಮದ ವೇಳೆ ಸಾರ್ವಜನಿಕರಿಗೆ ಈ ತೀರ್ಥ ವಿತರಿಸಲಾಗುವುದು.