







ಮಡಿಕೇರಿ ಮಾ.21 NEWS DESK : ಎನ್‍ಟಿಇಪಿ ಕಾರ್ಯಕ್ರಮ ಕ್ಷಯಮುಕ್ತ ಭಾರತ ಅಭಿಯಾನದಡಿಯಲ್ಲಿ ಮಾ.24 ರಂದು ಬೆಳಗ್ಗೆ 11 ಗಂಟೆಗೆ ವಿಶ್ವ ಕ್ಷಯ ರೋಗ ದಿನಾಚರಣೆಯು ಕೊಡಗು ವೈದ್ಯಕೀಯ ವಿಜ್ಞಾನಗಳ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಕೊಡಗು ಜಿಲ್ಲೆಯಲ್ಲಿ 21 ಗ್ರಾಮ ಪಂಚಾಯಿತಿಗಳು ಕ್ಷಯಮುಕ್ತ ಗ್ರಾಮ ಪಂಚಾಯಿತಿಗಳಾಗಿ ಆಯ್ಕೆ ಆಗಿರುತ್ತದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ತಿಳಿಸಿದ್ದಾರೆ.