


ಮಡಿಕೇರಿ ಮಾ.21 NEWS DESK : ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಕೊಡವ ಕುಟುಂಬ ತಂಡಗಳ ನಡುವಿನ ಹಾಕಿ ಹಬ್ಬದ ‘ಮುದ್ದಂಡ ಹಾಕಿ ಉತ್ಸವ’ ಮಾ.28 ರಂದು ಮಡಿಕೇರಿಯ ಫೀ.ಮಾ. ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಉದ್ಘಾಟನೆಗೊಳ್ಳಲಿದೆ. ಅಂದು ಬೆಳಿಗ್ಗೆ 9.45ಗಂಟೆಗೆ ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಫೀ.ಮಾ.ಕಾರ್ಯಪ್ಪ ಕಾಲೇಜು ಮೈದಾನದವರೆಗೆ ಕೊಡವ ಸಾಂಪ್ರದಾಯಿಕ ಮತ್ತು ಸಾಂಸ್ಕೃತಿಕ ಮೆರವಣಿಗೆ ನಡೆಯಲಿದ್ದು, ನಂತರ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಾಗುವುದು. ಸಭಾ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಒಡೆಯರ್, ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಅರ್ಜುನ ಪ್ರಶಸ್ತಿ ವಿಜೇತ ಒಲಂಪಿಯನ್ ಅಂಜಪರವಂಡ ಬಿ.ಸುಬ್ಬಯ್ಯ, ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ, ಅತಿಥಿಗಳಾಗಿ ಜಿಲ್ಲಾಧಿಕಾರಿ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕೊಡಗು ವಿಶ್ವ ವಿದ್ಯಾನಿಲಯದ ಉಪ ಕುಲಪತಿ ಅಶೋಕ್ ಸಂಗಪ್ಪ ಆಲೂರ, ಮಾಜಿ ಶಾಸಕರುಗಳಾದ ಮಂಡೇಪಂಡ ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರುಗಳಾದ ಶಾಂತೆಯಂಡ ವೀಣಾ ಅಚ್ಚಯ್ಯ, ಮಂಡೇಪಂಡ ಸುನಿಲ್ ಸುಬ್ರಮಣಿ ಹಾಗೂ ಚೆಪ್ಪುಡಿರ ಅರುಣ್ ಮಾಚಯ್ಯ ಪಾಲ್ಗೊಳ್ಳಲಿದ್ದಾರೆ. ಮುದ್ದಂಡ ಕುಟುಂಬದ ಅಧ್ಯಕ್ಷ ಮುದ್ದಂಡ ಬಿ.ದೇವಯ್ಯ ಹಾಗೂ ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ ಉಪಸ್ಥಿತರಿರುವರು. ಉದ್ಘಾಟನಾ ಸಮಾರಂಭದ ಪ್ರಯುಕ್ತ ಪ್ರದರ್ಶನ ಪಂದ್ಯ ಮಧ್ಯಾಹ್ನ 12.30 ಗಂಟೆಗೆ ಕೊಡಗು ಜಿಲ್ಲಾಡಳಿತ ಹಾಗೂ ಆಯೋಜಕ ಕುಟುಂಬ ಮತ್ತು ಕೊಡವ ಹಾಕಿ ಅಕಾಡೆಮಿ X1 ಹಾಗೂ ಕರ್ನಾಟಕ X1 ತಂಡದ ನಡುವೆ ನಡೆಯಲಿದೆ ಎಂದು ಮುದ್ದಂಡ ಹಾಕಿ ಉತ್ಸವ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.