


ಮಡಿಕೇರಿ NEWS DESK ಮಾ.21 : ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆಮಾಡು ಗ್ರಾಮದ ಕುರುಳಿ ರಸ್ತೆಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸರಬರಾಜು ಮಾಡುತ್ತಿದ್ದ ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಎಮ್ಮೆಮಾಡು ಗ್ರಾಮದ ನಿವಾಸಿಗಳಾದ ಸಾಧಿಕ್ ಎಂ.ಹೆಚ್ (30), ಅಶ್ರಫ್ ಕೆ.ಎಂ (44) ಹಾಗೂ ಸರ್ಫುದ್ದೀನ್ (24) ಬಂಧಿತ ಆರೋಪಿಗಳಾಗಿದ್ದಾರೆ. ಇವರ ಬಳಿಯಿಂದ 10.37 ಗ್ರಾಂ ಎಂಡಿಎಂಎ ಮಾದಕ ವಸ್ತು ಹಾಗೂ ಕೃತ್ಯಕ್ಕೆ ಬಳಸಿದ ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ಸೂರಜ್.ಪಿ.ಎ, ಮಡಿಕೇರಿ ಗ್ರಾಮಾಂತರ ಠಾಣೆಯ ಪ್ರಬಾರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ.ಪಿ, ನಾಪೋಕ್ಲು ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ.ಈ ಹಾಗೂ ಸಿಬ್ಬಂದಿಗಳು ಖಚಿತ ಮಾಹಿತಿ ದೊರೆತ ಹಿನ್ನೆಲೆ ದಾಳಿ ನಡೆಸಿ ಮಾಲು ಸಹಿತ ಆರೋಪಿಗಳನ್ನು ಬಂಧಿಸಿದರು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಶ್ಲಾಘಿಸಿದ್ದಾರೆ. ಮಾದಕ ವಸ್ತು ಸಾಗಾಟ ಮತ್ತು ಮಾರಾಟದ ಕುರಿತು ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದ್ದಾರೆ.