


ಮಡಿಕೇರಿ ಮಾ.22 NEWS DESK : ‘ಮುದ್ದಂಡ ಕಪ್ ಹಾಕಿ ಉತ್ಸವ’ದ ಕ್ರೀಡಾಜ್ಯೋತಿ ಮಾ.25ರಂದು ಕೊಡವ ಹಾಕಿ ಹಬ್ಬದ ಜನಕರಾದ ಕರಡ ಗ್ರಾಮದ ಪಾಂಡಂಡ ಕುಟುಂಬದ ಐನ್ ಮನೆಯಲ್ಲಿ ಉದ್ಘಾಟನೆಗೊಳ್ಳಲಿದೆ. ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿ ಮತ್ತು ಕೊಡವ ಹಾಕಿ ಅಕಾಡೆಮಿಯ ಸಂಯುಕ್ತ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕ್ರೀಡಾಜ್ಯೋತಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಹಾಗೂ ಕೊಡವ ಹಾಕಿ ಹಬ್ಬದ ಜನಕ ದಿ.ಪಾಂಡಂಡ ಕುಟ್ಟಪ್ಪ ಅವರ ಪತ್ನಿ ಲೀಲ ಕುಟ್ಟಪ್ಪ ಅವರು ಉದ್ಘಾಟಿಸಲಿದ್ದಾರೆ. 1997ರಿಂದ ಇಲ್ಲಿಯವರೆಗೆ ಹಾಕಿ ಉತ್ಸವ ಆಯೋಜಿಸಿದ್ದ ಎಲ್ಲಾ ಕುಟುಂಬಗಳ ಐನ್ ಮನೆಗಳಿಗೆ ಮ್ಯಾರಥಾನ್ ಮೂಲಕ ಕ್ರೀಡಾಜ್ಯೋತಿಯನ್ನು ಕೊಂಡೊಯ್ಯಲಾಗುವುದು. ಮಾ.28ರಂದು ಬೆಳಿಗ್ಗೆ 9ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಿಂದ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದವರೆಗೆ ಬೃಹತ್ ಮೆರವಣಿಗೆಯ ಮೂಲಕ ಕ್ರೀಡಾಜ್ಯೋತಿ ಸಾಗಲಿದೆ. ::: ಕ್ರೀಡಾಜ್ಯೋತಿ ಮಾರ್ಗ ::: ಮಾ.25ರಂದು ಕರಡ ಪಾಂಡಂಡ, ಕಿರುಗೂರು ಚೆಪ್ಪುಡಿರ, ಅಲಮೇಂಗಡ, ಟಿ.ಶೆಟ್ಟಿಗೇರಿ- ಒಂಟಿಯಂಗಡಿ ಮಚ್ಚಮಾಡ, ಚೆಕ್ಕೇರ, ಕಳ್ಳಿಚಂಡ, ಕುಂದ ಮನೆಯಪಂಡ, ನಾಂಗಾಲ ಕುಪ್ಪಂಡ, ಮಾ.26ರಂದು ವಿರಾಜಪೇಟೆ ಕಾವಾಡಿ ನೆಲ್ಲಮಕ್ಕಡ, ಚೆಂಬೆಬೆಳ್ಳೂರು ಈಶ್ವರ ದೇವಾಲಯ, ಮಂಡೇಪಂಡ, ಕುಕ್ಲೂರು ತಾತಂಡ, ವಿರಾಜಪೇಟೆ ಕೊಡವ ಸಮಾಜ, ಅರಮೇರಿ ಮುದ್ದಂಡ, ಐಚೆಟ್ಟಿರ, ಕಾಕೋಟುಪರಂಬು ಮಂಡೇಟಿರ, ಬಲ್ಲಚಂಡ, ಕರಡ ಕೋಡಿರ, ಬಾವಲಿ ಬಿದ್ದಂಡ, ಮಾ.27ರಂದು ಬಾವಲಿ ಮಾದಂಡ, ಕಲಿಯಂಡ, ನೆಲ್ಜಿ ಮಾಳೆಯಂಡ, ಅಪ್ಪಚೆಟ್ಟೋಳಂಡ, ನಾಪೋಕ್ಲು ಕುಲ್ಲೇಟಿರ, ಬಿದ್ದಾಟಂಡ, ಕೊಳಕೇರಿ ಕುಂಡ್ಯೋಳಂಡ, ಮಡಿಕೇರಿ ಶಾಂತೆಯಂಡ ಮತ್ತು ಮಾ.28ರಂದು ಜನರಲ್ ತಿಮ್ಮಯ್ಯ ವೃತ್ತ, ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನ.