Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ : ಸಾಮಾಜಿಕ ಜಾಲತಾಣ ಸದ್ಬಳಕೆ ಮಾಡಿಕೊಳ್ಳಿ : ಅಗರ್ತ ವೆಂಕಟ್ರಮಣ ಭಟ್
ಇತ್ತೀಚಿನ ಸುದ್ದಿಗಳು ಕರ್ನಾಟಕ

ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ : ಸಾಮಾಜಿಕ ಜಾಲತಾಣ ಸದ್ಬಳಕೆ ಮಾಡಿಕೊಳ್ಳಿ : ಅಗರ್ತ ವೆಂಕಟ್ರಮಣ ಭಟ್

ಮಾರ್ಚ್ 22, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು ಮಾ.22 NEWS DESK : ತಾಂತ್ರಿಕತೆ ಬಹಳ ಮುಂದುವರಿದಿದೆ, ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿಗಳ ಕಣಜವೇ ಸಿಗುತ್ತದೆ. ಅದರಲ್ಲಿ ಕೆಟ್ಟದ್ದೂ ಇದೆ ಒಳ್ಳೆಯದೂ ಇದೆ. ಅದರ ಬಳಕೆಯಲ್ಲಿ ಬುದ್ದಿವಂತಿಕೆಯನ್ನು ತೋರಿಸಿದರೆ ನಮ್ಮ ಭವಿಷ್ಯವನ್ನು ಚೆನ್ನಾಗಿ ರೂಪಿಸಿಕೊಳ್ಳಬಹುದು ಎಂದು ವೆಂಚೂರ್‍ಸಾಫ್ಟ್ ಗ್ಲೋಬಲ್ ಯುಎಸ್‍ಎ ಮುಖ್ಯ ಕಾರ್ಯನಿರ್ವಣಾಧಿಕಾರಿ ಅಗರ್ತ ವೆಂಕಟ್ರಮಣ ಭಟ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆದ ಕಾಲೇಜು ವಾರ್ಷಿಕೋತ್ಸವ ಸಮಾರಂಭ ನವರಂಗ್-2025 ಇದರ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಕಾಲೇಜು ಜೀವನ ಅತಿ ಮುಖ್ಯವಾದದ್ದು ಅಲ್ಲಿನ ಘಟನೆಗಳನ್ನು ನಾವು ಯಾವತ್ತೂ ಮರೆಯುವುದಕ್ಕೆ ಸಾಧ್ಯವಿಲ್ಲ. ಸಮಾಜದಲ್ಲಿ ವ್ಯಕ್ತಿಯೊಬ್ಬನನ್ನು ಗುರುತಿಸುವುದು ಅವನ ಶ್ರೀಮಂತಿಕೆಯಿಂದಲ್ಲ, ಬದಲಿಗೆ ಅವನ ವ್ಯಕ್ತಿತ್ವದಿಂದ. ನಿಮ್ಮ ನಡತೆ, ವ್ಯವಹಾರ ಮತ್ತು ಸಂಪರ್ಕ ಉತ್ತಮವಾಗಿದ್ದರೆ ಸಮಾಜದಲ್ಲಿ ನೀವು ಉನ್ನತರಾಗುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದರು. ಮುಖ್ಯ ಅತಿಥಿ ಮರ್ಸಿಡಿಸ್ ಬೆಂಜ್ ರೀಸರ್ಚ್ ಎಂಡ್ ಡೆವೆಲಪ್‍ಮೆಂಟ್ ಇಂಡಿಯಾ ಇದರ ಸೀನಿಯರ್ ಕನ್ಸಲ್ಟೆಂಟ್ ಹಾಗೂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಶ್ರೀಮತಿ ತನ್ವಿ.ಡಿ.ಐ ಕಾಲೇಜಿನಲ್ಲಿ ತಮ್ಮ ವಿದ್ಯಾರ್ಥಿ ಜೀವನದ ಸವಿನೆನಪುಗಳನ್ನು ಮೆಲುಕು ಹಾಕಿದರು. ತಾನು ಈ ಕಾಲೇಜಿನಲ್ಲಿ ಕಲಿತ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು, ಕಾರ್ಯಕ್ರಮ ನಿರ್ವಹಣೆ, ಟೀಮ್ ವರ್ಕ್, ಸಮಯ ನಿರ್ವಹಣೆ ಮುಂತಾದವುಗಳು ನನ್ನ ವೃತ್ತಿ ಜೀವನದಲ್ಲಿ ತುಂಬಾ ಸಹಕಾರಿಯಾಗಿದೆ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್.ಶೆಣೈ ಮಾತನಾಡಿ ವಿದ್ಯಾರ್ಥಿಗಳು ತಾವೇನಾಗಬೇಕೆಂದು ನಿರ್ಧರಿಸಿ ಅದಕ್ಕೆ ತಕ್ಕುದಾದ ಅಡಿಪಾಯವನ್ನು ಗಟ್ಟಿಗೊಳಿಸಬೇಕು ಎಂದರು. ಇಂಜಿನಿಯರ್ ಆದವ ನಿಜವಾದ ಸಮಸ್ಯೆಗಳನ್ನು ಪರಿಹರಿಸಬಲ್ಲವನಾಗಿರುತ್ತಾನೆ ಇದಕ್ಕಾಗಿ ಅಪಾರ ಅನುಭವದ ಅಗತ್ಯವಿದೆ, ಅದನ್ನು ಗಳಿಸಿಕೊಳ್ಳುವಲ್ಲಿ ನಿಮ್ಮ ಜಾಣತನವನ್ನು ಬಳಸಿಕೊಳ್ಳಿ ಎಂದರು. ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಮೂರನೇ ರ್ಯಾಂಕ್ ಗಳಿಸಿದ ಕೇಶವ ಪ್ರಜ್ವಲ್, ಐದನೇ ರ್ಯಾಂಕ್ ಗಳಿಸಿದ ಕೆ.ಪಲ್ಲವಿ ಹಾಗೂ ಎಂಬಿಎ ವಿಭಾಗದಲ್ಲಿ ಐದನೇ ರ್ಯಾಂಕ್ ಗಳಿಸಿದ ಸ್ನೇಹಾ ಪೈ.ಕೆ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಪ್ರತಿ ವಿಭಾಗದಲ್ಲಿ ಶೈಕ್ಷಣಿಕ ಸಾಧನೆಯನ್ನು ಮಾಡಿದ, ದತ್ತಿ ನಿಧಿ ಪ್ರಶಸ್ತಿಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸಾಹಿತ್ಯಿಕ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಚಾಂಪಿಯನ್ ಆದ ತಂಡಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಬಲರಾಮ ಆಚಾರ್ಯ.ಜಿ.ಎಲ್, ಇಂಜ್ನಿಯರಿಂಗ್ ಕಾಲೇಜು ಆಡಳಿತ ಮಂಡಲಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ಕೋಶಾಧಿಕಾರಿ ಮುರಳೀಧರ ಭಟ್, ನಿರ್ದೇಶಕರಾದ ರವಿಕೃಷ್ಣ.ಡಿ.ಕಲ್ಲಾಜೆ, ಸತ್ಯನಾರಾಯಣ ಭಟ್, ಸಂತೋಷ್ ಕುತ್ತಮೊಟ್ಟೆ, ಡಾ.ಯಶೋಧಾ ರಾಮಚಂದ್ರ, ಕಾರ್ಯಕ್ರಮ ಸಂಯೋಜಕ ಡಾ.ಚೇತನ್.ಪಿ.ಡಿ ಮತ್ತು ವಿದ್ಯಾರ್ಥಿ ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಕಾಲೇಜಿನ ವಾರ್ಷಿಕ ವರದಿಯನ್ನು ಮಂಡಿಸಿದರು. ಸ್ಕಂದಶ್ಯಾಮ ಅತಿಥಿಗಳನ್ನು ಪರಿಚಯಿಸಿದರು. ಶಿವಾನಿ ಸ್ವಾಗತಿಸಿ, ತಾಶ್ವಿ ರೈ ವಂದಿಸಿದರು. ತಾರಿಣಿ ಹಾಗೂ ಶ್ರೀನಿವಾಸ್ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.16 NEWS DESK : ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಿದ್ಧತೆಗಳು…

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.