Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಪತ್ರಕರ್ತರ ಸಂಘದ ಸಮಾರಂಭ : ಸತ್ಯನಿಷ್ಠ ವರದಿಗಳನ್ನು ಪ್ರಕಟಿಸುವಾಗ ಪತ್ರಕರ್ತರಿಗೆ ಯಾವುದೇ ಹಿಂಜರಿಕೆ ಇರಬಾರದು : ಎಂ.ಎ.ನಿರಂಜನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಪತ್ರಕರ್ತರ ಸಂಘದ ಸಮಾರಂಭ : ಸತ್ಯನಿಷ್ಠ ವರದಿಗಳನ್ನು ಪ್ರಕಟಿಸುವಾಗ ಪತ್ರಕರ್ತರಿಗೆ ಯಾವುದೇ ಹಿಂಜರಿಕೆ ಇರಬಾರದು : ಎಂ.ಎ.ನಿರಂಜನ್*

ಮಾರ್ಚ್ 23, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮಾ.23 : ಸಮಾಜದಲ್ಲಿ ಒಡೆದ ಮನಸ್ಸುಗಳನ್ನು ಬೆಸೆಯುವ ಶಕ್ತಿ ಪತ್ರಕರ್ತರ ಹರಿತವಾದ ಲೇಖನಿಗಿದೆ. ಪತ್ರಕರ್ತರು ಸತ್ಯನಿಷ್ಠ ವರದಿಗಳನ್ನು ಪ್ರಕಟಿಸುವಾಗ ಯಾವುದೇ ಹಿಂಜರಿಕೆ ಇರಬಾರದು ಎಂದು ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್ ಕರೆ ನೀಡಿದ್ದಾರೆ. ಕೊಡಗು ಪತ್ರಕರ್ತರ ಸಂಘ(ರಿ)ದ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ ಮತ್ತು ಪತ್ರಕರ್ತರ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮುಖ್ಯ ಭಾಷಣಕಾರರಾಗಿ ಅವರು ಮಾತನಾಡಿದರು. ನ್ಯಾಯಾಂಗದ ತೀರ್ಪಿನ ಬಗ್ಗೆ ವಿಶ್ಲೇಷಣಾತ್ಮಕವಾಗಿ ಪ್ರಶ್ನಿಸುವ ಹಕ್ಕು ಪತ್ರಕರ್ತರಿಗೆ ಸದಾ ಇರುತ್ತದೆ. ಹೀಗಾಗಿ ಪತ್ರಕರ್ತರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಎಂದಿಗೂ ಧಕ್ಕೆಯಾಗುವುದಿಲ್ಲ. ಹೀಗಿದ್ದರೂ ಇಂದಿನ ದಿನಗಳಲ್ಲಿ ತನಿಖಾ ವರದಿಗಳು ಕಡಿಮೆಯಾಗುತ್ತಿರುವುದು ವಿಷಾಧನೀಯ. ಈ ನಿಟ್ಟಿನಲ್ಲಿ ಕೊಡಗಿನ ಪತ್ರಕರ್ತರು ಗಮನಹರಿಸುವಂತೆ ಸಲಹೆ ನೀಡಿದರು. ಇಂದು ಪತ್ರಿಕೆಗಳನ್ನು ಓದುವವರ ಸಂಖ್ಯೆ ಕಡಿಮೆಯಾಗಿದೆ. ಪತ್ರಕರ್ತರು ಚಿಂತನಾಶೀಲ ಬರವಣಿಗೆಯ ಕಡೆ ಹೆಚ್ಚಿನ ಆದ್ಯತೆ ನೀಡಬೇಕು. ಹಿರಿಯರ ಗರಡಿಯಲ್ಲಿ ಮುನ್ನುಗ್ಗುವ ಪ್ರಯತ್ನ ಮಾಡಬೇಕು. ನಿಖರತೆ ಇದ್ದರೆ ಯಾವ ವಿಚಾರದಲ್ಲೂ ಎದರುವಂತಿಲ್ಲ. ಪತ್ರಕರ್ತರು ಜವಾಬ್ದಾರಿ ಅರಿತು ಕೆಲಸ ಮಾಡಬೇಕಿದೆ ಎಂದು ಸಲಹೆ ನೀಡಿದರು. ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕೊಡಗು ಪತ್ರಕರ್ತರ ಸಂಘ ಬಲಿಷ್ಠವಾಗಬೇಕಾದರೆ ಸಂಘದ ಸಾರಥಿ ಗಟ್ಟಿಯಾಗಿರಬೇಕು. ಅನಿಲ್ ಹೆಚ್.ಟಿ. ಅವರು ಎಲ್ಲರನ್ನು ಒಗ್ಗೂಡಿಸಿಕೊಂಡು ಸಂಘವನ್ನು ಮುನ್ನಡೆಸಲಿದ್ದಾರೆ. ಸಂಘದಲ್ಲಿ ತಮ್ಮ ತಂದೆ ತಾಯಿಯ ಹೆಸರಿನಲ್ಲಿ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸುವುದಾಗಿ ಇದೇ ಸಂದರ್ಭ ಘೋಷಿಸಿದರು. ಕೂರ್ಗ್ ಹೋಟೇಲ್ಸ್, ರೆಸಾರ್ಟ್ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ಸಂಘದ ವಾಹನ ಸ್ಟಿಕ್ಕರ್ ಬಿಡುಗಡೆಗೊಳಿಸಿ ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಸಾಮಾಜಿಕ ಕಾಳಜಿಯಿಂದ ಪತ್ರಿಕಾರಂಗ ನಡೆಯುತ್ತಿದೆ. ಬೇರೆ ಜಿಲ್ಲೆಗೆ ಹೋಳಿಕೆ ಮಾಡಿದರೆ ಕೊಡಗು ಜಿಲ್ಲೆಯಲ್ಲಿ ಪತ್ರಕರ್ತರು ಕಾಳಜಿಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಕೊಡಗು ಪತ್ರಕರ್ತರ ಸಂಘಕ್ಕೆ ಮುಂದಿನ ದಿನಗಳಲ್ಲಿ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಇದೇ ಸಂದರ್ಭ ಭರವಸೆ ನೀಡಿದರು. ಪ್ರವಾಸೋದ್ಯಮದ ಬೆಳವಣಿಗೆ ನಿಟ್ಟಿನಲ್ಲಿ ಕೊಡಗಿನ ಪತ್ರಕರ್ತರು ನಿರಂತರ ಸಹಕಾರ ನೀಡುತ್ತಾ ಬಂದಿದ್ದಾರೆ ಎಂದು ಶ್ಲಾಘಿಸಿದ ದಿನೇಶ್ ಕಾರ್ಯಪ್ಪ, ಕೊಡಗಿನಲ್ಲಿ ಪ್ರವಾಸೋದ್ಯಮಕ್ಕೆ ನವ ರೂಪುರೇಷೆ ನೀಡುವ ನಿಟ್ಟಿನಲ್ಲಿ ಏಪ್ರಿಲ್ ಎರಡನೇ ವಾರದಲ್ಲಿ ಮಡಿಕೇರಿಯಲ್ಲಿ ಎರಡು ದಿನ ಪ್ರವಾಸೋದ್ಯಮ ಉತ್ಸವವನ್ನು ಆಯೋಜಿಸಿದ್ದು, ರಾಜ್ಯ ಮಟ್ಟದಿಂದಲೂ ಪ್ರವಾಸೋದ್ಯಮ ಕ್ಷೇತ್ರದ ಅನೇಕ ಪ್ರಮುಖರು ಈ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದೂ ದಿನೇಶ್ ಕಾರ್ಯಪ್ಪ ಪ್ರಕಟಿಸಿದರು.
ಕೊಡಗು ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಅನಿಲ್ ಹೆಚ್.ಟಿ. ಕೊಡಗಿನ ಪತ್ರಿಕಾ ಕ್ಷೇತ್ರದ ಭೀಷ್ಮ ಶಕ್ತಿ ಪತ್ರಿಕೆಯ ಸ್ಥಾಪಕರಾದ ಬಿ.ಎಸ್. ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಪದಗ್ರಹಣ ಸ್ವೀಕರಿಸಿ ಮಾತನಾಡಿ ಸಂಘದ ಅಧ್ಯಕ್ಷನಾಗಿ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದೇನೆ. ಇದರಿಂದ ನನ್ನ ಹೊಣೆಗಾರಿಕೆ ಹೆಚ್ಚಾಗಿದೆ. ಸಂಘ ಕಳೆದ ಎರಡು ವರ್ಷದಲ್ಲಿ ಅತ್ಯುತ್ತಮವಾಗಿ ಬೆಳೆದುಬಂದಿದೆ. ನಿವೇಶನ ರಹಿತ ಪತ್ರಕರ್ತರಿಗೆ ನಿವೇಶನ, ಪತ್ರಕರ್ತರು ಹಾಗೂ ತಮ್ಮ ಕುಟುಂಬ ಸದಸ್ಯರಿಗೆ ಗುಂಪು ಆರೋಗ್ಯ ವಿಮೆ ಸೇರಿದಂತೆ ಹಲವು ಉಪಯುಕ್ತ ಯೋಜನೆ ರೂಪಿಸಲಾಗುತ್ತದೆ ಎಂದರು. ಸಂಘದಲ್ಲಿ ನೂರಕ್ಕೂ ಅಧಿಕ ಮಂದಿ ಸದಸ್ಯರಿದ್ದು, ಪತ್ರಿಕಾ ಭವನ ಟ್ರಸ್ಟ್ ಕೂಡ ಬೆನ್ನೆಲುಬಾಗಿ ನಿಂತಿದೆ. ಎರಡು ವರ್ಷದಲ್ಲಿ ಸುಮಾರು 7 ದತ್ತಿ ಪ್ರಶಸ್ತಿಗಳನ್ನು ಸ್ಥಾಪಿಸಲಾಗಿದೆ. ಒಟ್ಟು 10 ದತ್ತಿ ಪ್ರಶಸ್ತಿ ಸ್ಥಾಪಿಸುವ ಗುರಿ ಇದೆ. ಸಂಘದಿಂದ ಹಲವಾರು ಸಾಮಾಜಿಕ ಕಳಕಳಿಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಸಂಘದ ಗೌರವ ಸಲಹೆಗಾರರಾದ ಟಿ.ಪಿ. ರಮೇಶ್ ಮಾತನಾಡಿ ಪತ್ರಕರ್ತರ ಸಂಘ ಸಾರ್ವಜನಿಕವಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಹೊಸ ಸಂಘವನ್ನು ರಚನೆ ಮಾಡಿ ಕಳೆದ ಎರಡು ವರ್ಷದಿಂದ ಅತ್ಯುತ್ತಮ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ತಿಳಿಸಿದರು. ಸಂಘದ ನಿಕಟಪೂರ್ವ ಅಧ್ಯಕ್ಷ ಎಸ್.ಎ. ಮುರುಳೀಧರ್ ಮಾತನಾಡಿ ಕೊಡಗು ಜಿಲ್ಲೆಯಲ್ಲಿ ನೋಂದಾಯಿತ ಸಂಘ ಅಸ್ಥಿತ್ವದಲ್ಲಿದ್ದರೆ ಅದು ಕೊಡಗು ಪತ್ರಕರ್ತರ ಸಂಘ ಮಾತ್ರ. ನಾಲ್ಕು ತಾಲೂಕು ಸಮಿತಿಗಳನ್ನು ಕೂಡ ರಚನೆ ಮಾಡಿಕೊಂಡು ಕ್ರೀಯಾಶೀಲವಾಗಿ ಕೆಲಸ ಮಾಡಿಕೊಂಡು ಬರುತ್ತಿದೆ. ಸಂಘದಲ್ಲಿ ಒಗ್ಗಟ್ಟು ಇದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದು ಎಂದು ಹೇಳಿದರು. ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರರಾದ ಬಿ.ಜಿ.ಅನಂತಶಯನ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿಶ್ವದಾಖಲೆ ಮಾಡಿರುವ ಮದೆನಾಡಿನ ಸಿಂಚನಾ, ದೆಹಲಿಯಲ್ಲಿ ನಡೆದ ಸಾಹಿತ್ಯ ಉತ್ಸವದಲ್ಲಿ ಕೊಡಗನ್ನು ಪ್ರತಿನಿಧಿಸಿದ್ದ ಡಾ. ಮುಲ್ಲೇಂಗಡ ರೇವತಿ ಪೂವಯ್ಯ, ಹೆಸರಾಂತ ಜಾದು ಗಾರ ವಿಕ್ರಂ ಜಾದೂಗಾರ್ ಹಾಗೂ ಕೊಡಗು ಪತ್ರತರ್ಕರ ಸಂಘದ ನಿಕಟಪೂರ್ವ ಅಧ್ಯಕ್ಷ ಎಸ್.ಎ. ಮುರುಳೀಧರ್, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ಸಂಘದ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ವಿ.ರವಿಕುಮಾರ್, ಸಾಂಸ್ಕೃತಿಕ ಸಮಿತಿ ಸಂಚಾಲಕ ಉಜ್ವಲ್ ರಂಜಿತ್, ಸಂಘದ ನೂತನ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ ಮತ್ತಿತರರು ಪಾಲ್ಗೊಂಡಿದ್ದರು. ವಿಶ್ವದಾಖಲೆ ಮಾಡಿರುವ ಮದೆನಾಡಿನ ಸಿಂಚನಾ ಅವರಿಂದ ಯೋಗ ಪ್ರದರ್ಶನ, ವಿಕ್ರಂ ಜಾದೂಗಾರ್ ಅವರಿಂದ ಜಾದೂ ಪ್ರದರ್ಶನ ಜನ ಮನ ಸೆಳೆಯಿತು. ಕಾರ್ಯಕ್ರಮವನ್ನು ನಿರ್ದೇಶಕ ವಿನೋದ್ ಮೂಡಗದ್ದೆ, ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮವನ್ನು ನಿರ್ದೇಶಕ ರಂಜಿತ್ ಕವಲಪಾರ ನಿರೂಪಿಸಿದರು. ಸಂಘದ ಕುಶಾಲನಗರ ತಾಲೂಕು ಅಧ್ಯಕ್ಷ ವಿಘ್ನೇಶ್ ಭೂತನಕಾಡು, ಸಂಘದ ಜಿಲ್ಲಾ ನಿರ್ದೇಶಕ ಎಂ.ಎನ್. ನಾಸಿರ್, ಉಪಾಧ್ಯಕ್ಷ ತೇಲಪಂಡ ಕವನ್ ಕಾರ್ಯಪ್ಪ ಸನ್ಮಾನಿತರನ್ನು ಪರಿಚಯಿಸಿದರು. ಜಿಲ್ಲೆಯ ವಿವಿಧ ಭಾಗದದಿಂದ ಹಲವಾರು ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಜರಿದ್ದು, ಸಂಘಕ್ಕೆ ಶುಭ ಹಾರೈಸಿದರು. ಇದೇ ಸಂದರ್ಭ ವಿರಾಜಪೇಟೆಯ ಪುರಸಭೆಯ ಮಾಜಿ ಅಧ್ಯಕ್ಷೆ ಕಾಂತಿ ಸತೀಶ್ ಸಂಘಕ್ಕೆ ದತ್ತಿ ಪ್ರಶಸ್ತಿ ನೀಡುವುದಾಗಿ ಘೋಷಿಸಿದರು. ಸಾಂಸ್ಕೃತಿಕ ಸಂಭ್ರಮ : ಸಂಘದ ಸಲಹೆಗಾರರಾದ ಬಿ.ಜಿ.ಅನಂತಶಯನ ಅವರು ಹಾಡು ಹಾಡುವ ಮೂಲಕ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಜ್ವಲ್ ರಂಜಿತ್, ಟಿಜೆ.ಪ್ರವೀಣ್, ಎಸ್.ಎ.ಮುರಳೀಧರ್, ಸಪ್ನಾ, ರಜತ್, ಶ್ರೀರಕ್ಷಾ, ಪ್ರತಿಮಾ ರೈ, ನಿಧಿ ಹಾಡಿದರು. ಪುಟಾಣಿಗಳಾದ ಮನ್ಹಾ ಫಾತಿಮಾ, ನಿತ್ಯಾ ನೃತ್ಯ ಮಾಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.