


ಮಡಿಕೇರಿ ಮಾ.24 NEWS DESK : ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಮಾ.26 ರಂದು ಇಪ್ಪತ್ತನೇ ವರ್ಷದ ಸೌಹಾರ್ದ ಇಫ್ತಾರ್ ಕೂಟ ನಡೆಯಲಿದೆ. ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ಅಪರಾಹ್ನ 5 ಗಂಟೆಗೆ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅರಂತೋಡು ಬದ್ರಿಯಾ ಜುಮಾ ಮಸೀದಿಯ ಖತೀಬರಾದ ಇಸ್ಮಾಯಿಲ್ ಫೈಝಿ ದುಃವಾಶೀರ್ವಾಚನ ನೀಡಲಿದ್ದಾರೆ. ವಿಶೇಷ ಅತಿಥಿಗಳಾಗಿ ಸುಳ್ಯದ ಬೀರಮಂಗಲ ಸೈಂಟ್ ಬ್ರಿಜಿಡ್ಸ್ ಚರ್ಚ್‍ನ ಧರ್ಮ ಗುರು ಫಾದರ್ ವಿಕ್ಟರ್ ಡಿ’ಸೋಜ ಹಾಗೂ ಮರ್ಕಂಜದ ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರ ಯೋಗೇಶ್ವರ ಸಿದ್ಧಪುರುಷಮಠದ ಧರ್ಮದರ್ಶಿ ಹಾಗೂ ಕರ್ನಾಟಕ ಅಖಿಲ ಭಾರತೀಯ ಸಂತ ಸಮಿತಿಯ ಮುಖ್ಯ ಕಾರ್ಯದರ್ಶಿ ರಾಜೇಶ್‍ನಾಥ್ ಜಿ ಸೇರಿದಂತೆ ಅಧಿಕಾರಿಗಳು, ಸಾಮಾಜಿಕ, ಧಾರ್ಮಿಕ, ರಾಜಕೀಯ ಮುಖಂಡರುಗಳು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನವು ಕಳೆದ 3 ದಶಕಗಳಿಂದ ಶೈಕ್ಷಣಿಕ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿ ಮತ್ತು ಕ್ರೀಡಾ ಚಟುವಟುಕೆಗಳನ್ನು ನಡೆಸುತ್ತ ಬಂದಿದ್ದು, ಪ್ರಾಕೃತಿಕ ವಿಕೋಪ ಹಾಗೂ ಕೋವಿಡ್ ಸಂದರ್ಭದಲ್ಲಿ ಸಂತ್ರಸ್ತರಿಗೆ ಆಹಾರ ಸಾಮಾಗ್ರಿಗಳು, ಬಟ್ಟೆ, ಔಷಧಿ ವಿತರಣೆ, ಮನೆ ನಿರ್ಮಾಣಕ್ಕೆ ಸಹಾಯಧನ, ಬಡ ಹೆಣ್ಣು ಮಕ್ಕಳ ವಿವಾಹಕ್ಕೆ ಸಹಾಯಧನ, ವಿದ್ಯಾರ್ಥಿ ವೇತನ ವಿತರಣೆ ಸೇರಿದಂತೆ ಹಲವು ಸಮಾಜ ಮುಖಿ ಕೆಲಸವನ್ನು ಮಾಡಿಕೊಂಡು ಬಂದಿದೆ. ಸಂಸ್ಥೆಯ ವತಿಯಿಂದ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ, ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ. ಈ ವರ್ಷ 20ನೇ ವರ್ಷದ ಸೌಹಾರ್ದ ಇಪ್ತಾರ್ ಕೂಟವನ್ನು ವಿಶೇಷ ಅತಿಥಿಗಳೊಂದಿಗೆ ಸಂಭ್ರಮದಿಂದ ನಡೆಸಲು ತೀರ್ಮಾನಿಸಲಾಗಿದೆ ಎಂದು ತೆಕ್ಕಿಲ್ ಪ್ರತಿಷ್ಠಾನದ ಕಾರ್ಯದರ್ಶಿ ಅಶ್ರಫ್ ಗುಂಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.