


ಮಡಿಕೇರಿ ಮಾ.24 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ಬ್ಲಾಕ್, ಗೋಣಿಕೊಪ್ಪದಲ್ಲಿರುವ ಜ್ಯೂಸ್ ಫ್ಯಾಕ್ಟರಿ ಬಳಿಯಿಂದ ಹೊಸೂರಿಗೆ ಹಾದುಹೋಗುವ ಲಿಂಕ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಈ ಸಂದರ್ಭ ಗ್ರಾಮಸ್ಥರು ಮಾತನಾಡಿ, ಗ್ರಾಮಸ್ಥರ ಹಲವು ವರ್ಷಗಳ ಬೇಡಿಕೆಗೆ ಸ್ಪಂದಿಸಿದ ಶಾಸಕರು ತಮ್ಮ ಅನುದಾನದಲ್ಲಿ ಕಾಮಗಾರಿಗೆ ಹಣ ಮೀಸಲಿಟ್ಟು, ಇಲ್ಲಿನ ದಾರಿಹೋಕರಿಗೆ ಸುಸಜ್ಜಿತ ರಸ್ತೆ ಒದಗಿಸುವುದು ಸಂತಸ ಮೂಡಿಸಿದೆ ಎಂದರು. ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಗೋಣಿಕೊಪ್ಪ ಪಂಚಾಯಿತಿ ಉಪಾಧ್ಯಕ್ಷರಾದ ಮಂಜುಳ, ಕಾಂಗ್ರೆಸ್ ಮುಖಂಡರು, ಸ್ಥಳೀಯ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.