


ಮಡಿಕೇರಿ ಮಾ.24 NEWS DESK : ಗೋಣಿಕೊಪ್ಪ ನಗರದಲ್ಲಿ ಹಾದುಹೋಗುವ ಬೈಪಾಸ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಅಧಿಕ ವಾಹನ ದಟ್ಟಣೆಯಿಂದ ಕೂಡಿರುವ ಈ ರಸ್ತೆಯು, ಹಲವು ಸಮಯಗಳಿಂದ ಹದಗೆಟ್ಟಿದ್ದು, ಇದನ್ನು ಸರಿಪಡಿಸುವುದಾಗಿ ಶಾಸಕರು ಈ ಹಿಂದೆ ಭರವಸೆ ನೀಡಿದ್ದರು. ಅದರಂತೆ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಇಂದು ಶಾಸಕರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಶಾಸಕರ ಸಹೋದರ ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ, ಗೋಣಿಕೊಪ್ಪ ಪಂಚಾಯಿತಿ ಉಪಾಧ್ಯಕ್ಷರಾದ ಮಂಜುಳ, ಕಾಂಗ್ರೆಸ್ ಮುಖಂಡರು ಹಾಗೂ ಮತ್ತಿತರ ಪ್ರಮುಖರು ಹಾಜರಿದ್ದರು.