Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
  • *ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*
  • *ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪೊನ್ನಂಪೇಟೆ : ಮಾ.25 ಮತ್ತು 26 ರಂದು ರಾಷ್ಟ್ರೀಯ ಸಮ್ಮೇಳನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪೊನ್ನಂಪೇಟೆ : ಮಾ.25 ಮತ್ತು 26 ರಂದು ರಾಷ್ಟ್ರೀಯ ಸಮ್ಮೇಳನ*

ಮಾರ್ಚ್ 24, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.24 NEWS DESK : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಡಿಯಲ್ಲಿರುವ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಲ್ಲಿ ಮಾ.25 ಮತ್ತು 26 ರಂದು “ಜೀವವೈವಿದ್ಯತೆಯ ಸಂರಕ್ಷಣೆ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ಹವಾಮಾನ ಬದಲಾವಣೆಯ ತಗ್ಗಿಸುವಿಕೆ” ಕುರಿತಾದ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಅರಣ್ಯ ಮಹಾವಿದ್ಯಾಲಯದ ಡೀನ್ ಹಾಗೂ ಸಮ್ಮೇಳನ ಆಯೋಜ ಮಂಡಳಿಯ ಅಧ್ಯಕ್ಷ ಡಾ.ಜಿ.ಎಂ.ದೇವಗಿರಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ದಿನಗಳ ಸಮ್ಮೇಳನದಲ್ಲಿ ದೇಶದ ವಿವಿಧ ವಿಶ್ವವಿದ್ಯಾಲಯಗಳು, ವೈಜ್ಞಾನಿಕ ಸಂಸ್ಥೆಗಳು ಮತ್ತು ಜೀವವೈವಿದ್ಯತೆಯ ಕುರಿತು ಸಂಶೋಧನೆ, ಅಕ್ಷಣದಲ್ಲಿ ತೊಡಗಿಕೊಂಡಿರುವ ವಿಜ್ಞಾನಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಸಮ್ಮೇಳನದಲ್ಲಿ ಜೀವವೈವಿದ್ಯತೆ : ಪ್ರಸ್ತುತ ಸ್ಥಿತಿ, ಅಪಾಯಗಳು ಹಾಗೂ ಸಂರಕ್ಷಣೆ, ಜೈವಿಕ ಪರಿಶೋಧನೆ ಮತು ಜೈವಿಕ ಸಂಪನ್ಮೂಲಗಳ ಸುಸ್ತಿರ ಬಳಕೆ, ಹವಾಮಾನ ಬದಲಾವಣೆ : ಪ್ರಸ್ತುತ ಸ್ಥಿತಿ ಮತ್ತು ಭವಿಷ್ಯದ ಸವಾಲುಗಳು, ಹವಾಮಾನ ಬದಲಾವಣೆ ಎದುರಿಸಲು ಪರ್ಯಾಯ ಶಕ್ತಿ ಮೂಲಗಳು ಎಂಬ ವಿಷಯಗಳ ಬಗ್ಗೆ ಪ್ರಬಂಧ ಮಂಡನೆ, ವಿಚಾರ ವಿನಿಮಯ. ಮುಂಬರುವ ದಿನಗಳಲ್ಲಿ ಕೈಗೊಳ್ಳಬೇಕಾಗಿರುವ ಸಂಶೋಧನೆಗಳ ಬಗ್ಗೆ ಚರ್ಚೆಗಳು ಇರಲಿವೆ ಎಂದು ತಿಳಿಸಿದರು. ಒಟ್ಟು 100ಕ್ಕೂ ಅಧಿಕ ‘ವಿಜ್ಞಾನಿಗಳು ಪಾಲ್ಗೊಂಡು, ವಿವಿಧ ವಿಷಯಗಳ ಒಟ್ಟು 123 ಸಂಶೋಧನಾ ಪ್ರಬಂಧಗಳನ್ನು ಮಂಡಿಸಲಿದ್ದಾರೆ. ಪಾರಿಸರಿಕ ವಿಷಯದಲ್ಲಿ ನುರಿತ 10 ತಜ್ಞರು ಸಂಬಂದಿಸಿದ ವಿವಿಧ ವಿಷಯಗಳಲ್ಲಿ ಉಪನ್ಯಾಸ ನೀಡಲಿದ್ದಾರೆ ಎಂದರು. ಸಮ್ಮೇಳನವನ್ನು ಮಾ.25 ರಂದು ಬೆಳಿಗ್ಗೆ 9.30 ಗಂಟೆಗೆ ಕಾಲೇಜಿನ ಸೆಮಿನಾರ್ ಹಾಲ್‍ನಲ್ಲಿ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಆರ್.ಸಿ.ಜಗದೀಶ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿಯ (ಭಾ.ಅ.ಸೇ) ಸದಸ್ಯ ಕಾರ್ಯದರ್ಶಿ ಎನ್.ಎಸ್.ಲಿಂಗರಾಜ್ ಭಾಗವಹಿಸಲಿದ್ದಾರೆ. ಸಮ್ಮೇಳನದ ಪ್ರಬಂಧ ಸಾರಾಂಶದ ಪುಸ್ತಕವನ್ನು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಪರಿಷತ್‍ನ ಕಾರ್ಯದರ್ಶಿ ಡಾ. ಯು.ಟಿ.ವಿಜಯ್ ಬಿಡುಗಡೆಗೊಳಿಸಲಿದ್ದಾರೆ. ಅತಿಥಿಗಳಾಗಿ ಬೆಂಗಳೂರು ಬಿ.ಬಿ.ಎಂ.ಪಿ ಉಪಅರಣ್ಯ ಸಂರಕ್ಷಣಾಧಿಕಾರಿ ಬಿ.ಎಲ್.ಜಿ.ಸ್ವಾಮಿ, ಕೆ.ಶಿ.ನಾ.ಕೃ.ತೋ.ವಿ.ವಿ ಯ ಉನ್ನತಾಧಿಕಾರಿ ಹಾಗೂ ಶಿಕ್ಷಣ ನಿರ್ದೇಶಕಿ ಡಾ. ಬಿ.ಹೇಮಳಾ ನಾಯಕ್, ಕುಲಸಚಿವ ಡಾ.ಕೆ.ಸಿ.ಶಶಿಧರ್, ಸಂಶೋಧನಾ ನಿರ್ದೇಶಕ ಡಾ.ಬಿ.ಎಂ.ದುಶ್ಯಂತ್ ಕುಮಾರ್, ವಿಸ್ತರಣಾ ನಿರ್ದೇಶಕ ಡಾ. ಕೆ.ಟಿ.ಗುರುಮೂರ್ತಿ, ಪಿಜಿಎಸ್ ಡೀನ್ ಡಾ.ಎಸ್.ಯು.ಪಾಟೀಲ್, ವಿದ್ಯಾರ್ಥಿ ಕಲ್ಯಾಣ ಡೀನ್ ಡಾ. ನಾರಾಯಣ ಎಸ್.ಮಾವರ್ಕರ್ ಪಾಲ್ಗೊಳ್ಳಲಿದ್ದಾರೆ ಎಂದರು. ಮಾ.26 ರಂದು ಮಧ್ಯಾಹ್ನ 3.30 ಗಂಟೆಗೆ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಲಿದ್ದು, ನೂತನವಾಗಿ ಸ್ಥಾಪಿತವಾಗಿರುವ ಮಂಡ್ಯ ಕೃಷಿ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಕೆ.ಎಮ್.ಹರಿಣಿಕುಮಾರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅತಿಥಿಗಳಾಗಿ (ಭಾ.ಆ.ಸೆ) ಉಪಅರಣ್ಯ ಸಂರಕ್ಷಣಾಧಿಕಾರಿ ಹೆಚ್.ಸಿ.ಬಾಲಚಂದ್ರ, ಪಾಲಿಬೆಟ್ಟ ಟಾಟಾ ಕಾಫಿ ಲಿಮಿಟೆಡ್‍ನ ಜನರಲ್ ಮ್ಯಾನೇಜರ್ ಬಿ.ಜಿ.ಪೊನ್ನಪ್ಪ, ಹಿರಿಯೂರು ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಸುರೇಶ್ ಡಿ.ಎಕಬೋಟೆ, ಮೂಡಿಗೆರೆ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ. ಶ್ರೀನಿವಾಸ್, ಶಿವಮೊಗ್ಗ ಕೃಷಿ ಮಹಾವಿದ್ಯಾಲಯದ ಡೀನ್ ಡಾ. ತಿಪ್ಪೇಶ್ ಡಿ., ಆಡಳಿತಾಧಿಕಾರಿಗಳು ಬಿ.ಸಿ.ಧನಂಜಯ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಪೊನ್ನಂಪೇಟೆಯಲ್ಲಿ ನಡೆಯುತ್ತಿರುವ ಈ ಸಮ್ಮೇಳನದಲ್ಲಿ ಹಲವಾರು ವಿಚಾರಗಳ ಕುರಿತು ಚರ್ಚೆಗಳಾಗಿ, ಜೀವಿವೈವಿದೈತೆಯ ಸಂರಕ್ಷಣೆಗೆ ಹಲವು ಶಿಫಾರಸುಗಳು ಹೊರಬರಲಿದ್ದು, ಮುಂದಿನ ಸಂಶೋಧನೆಗಳಿಗೆ ಈ ಶಿಫಾರಸುಗಳು ದಾರಿದೀಪವಾಗವುದೆಂದು ದೇವಗಿರಿ ಅಭಿಪ್ರಾಯ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ಹಾಗೂ ಸಹಾಯಕ ಉಪನ್ಯಾಸಕ ಡಾ. ಬಿ.ಎನ್.ಸತೀಶ್, ಡಾ.ಆರ್.ಎನ್.ಕೆಂಚರೆಡ್ಡಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.5 NEWS DESK : ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವಿರಾಜಪೇಟೆ ಸೇವಾ ಕೇಂದ್ರದಲ್ಲಿ ಪಾವನ ಪರ್ವ ರಕ್ಷಾಬಂಧನ…

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026

*ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*

ಸೆಪ್ಟೆಂಬರ್ 5, 2026

*ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.