


ಮಡಿಕೇರಿ ಮಾ.24 NEWS DESK : ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿಶೇಷ ಕಾಳಜಿ ವಹಿಸಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಕ್ಷೇತ್ರದ ಹಲವು ಶಾಲೆಗಳನ್ನು ಕೆಪಿಎಸ್ ಮಾದರಿಗೆ ಮೇಲ್ದರ್ಜೆಗೊಳಿಸುವಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಅದರ ಭಾಗವಾಗಿ ಇಂದು ಪೊನ್ನಂಪೇಟೆಯ ಸರಕಾರಿ ಶಾಲೆಯು ಕೆಪಿಎಸ್ ಶಾಲೆಯಾಗಿ ಮೇಲ್ದರ್ಜೆಗೇರಿಸಲು ಬೇಕಾದ ಅಗತ್ಯ ಮೂಲಭೂತ ಸೌಲತ್ತುಗಳ ಅಭಿವೃದ್ಧಿಗೆ ಚಾಲನೆ ನೀಡಿದರು. ಈ ಸಂದರ್ಭ ಕೊಡಗು ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹರೀಶ್, ಉಪಾಧ್ಯಕ್ಷ ಅಲಿರಾ ರಶೀದ್, ಪಂಚಾಯಿತಿ ಸದಸ್ಯರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.