


ಮಡಿಕೇರಿ ಮಾ.24 NEWS DESK : ಪೊನ್ನಂಪೇಟೆ ತಾಲ್ಲೂಕಿನ ಹಳ್ಳಿಗಟ್ಟು ಭಾಗದಲ್ಲಿ ಕಸ ವಿಲೇವಾರಿ ಘಟಕಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು, ಸಂಪೂರ್ಣ ಅಗ್ನಿಗಾಹುತಿಗೊಂಡಿದೆ. ಸ್ಥಳಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಈ ಸಂದರ್ಭ ಅಲ್ಲಿನ ಗ್ರಾಮಸ್ಥರು ಬೆಂಕಿ ಅವಘಡದ ಬಗ್ಗೆ ತಮ್ಮ ಸಂಶಯವನ್ನು ವ್ಯಕ್ತಪಡಿಸಿದಾಗ ಶಾಸಕರು ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ತಕ್ಷಣವೆ ಬೆಂಕಿ ಅವಘಡಕ್ಕೆ ಕಾರಣರಾದವರನ್ನು ತನಿಖೆ ಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮದ ಉತ್ತಪ್ಪ , ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್, ಅರಣ್ಯ ನಿಗಮದ ಮಾಜಿ ಸದಸ್ಯ ಎ.ಎಸ್.ನರೇನ್ ಕಾರ್ಯಪ್ಪ, ಕಾಂಗ್ರೆಸ್ ಮುಖಂಡರು, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.