


ಮಡಿಕೇರಿ ಮಾ.25 NEWS DESK : ವಿದ್ಯಾರ್ಥಿಗಳಲ್ಲಿ ಕ್ರೀಡಾ ಕೌಶಲ್ಯವನ್ನು ಹೆಚ್ಚಿಸುತ್ತಾ, ಸದಾ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುತ್ತಿರುವ ಅಂತರರಾಷ್ಟ್ರೀಯ ಮಾಜಿ ರಗ್ಬಿ ಆಟಗಾರ ಹಾಗೂ ಪ್ರಗತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಮಾದಂಡ ತಿಮ್ಮಯ್ಯ ಅವರ ಸಾರಥ್ಯದಲ್ಲಿ ನಡೆಯುತ್ತಿರುವ ವಿರಾಜಪೇಟೆ ಪ್ರಗತಿ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಏ.1 ರಿಂದ 30ರವರೆಗೆ ಕ್ರಿಕೆಟ್ ಮತ್ತು ಶಟಲ್ ಬ್ಯಾಡ್ಮಿಂಟನ್ ಬೇಸಿಗೆ ಶಿಬಿರ ನಡೆಯಲಿದೆ.
ಏ.1 ರಿಂದ ಮೇ 1 ರವರೆಗೆ ವಿರಾಜಪೇಟೆ ಪ್ರಗತಿ ಶಾಲೆಯಲ್ಲಿ ಲೆದರ್ ಬಾಲ್ ಕ್ರಿಕೆಟ್ ತರಬೇತಿ ನಡೆಯಲಿದೆ. ಮೊದಲ ತಂಡಕ್ಕೆ ಬೆಳಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 3.30 ಗಂಟೆಯವರೆಗೆ (ಫುಲ್ ಡೇ ಬ್ಯಾಚ್), ಎರಡನೇ ಬ್ಯಾಚ್ ಸಂಜೆ ನಾಲ್ಕು ಗಂಟೆಯಿಂದ ಆರು ಗಂಟೆಯವರೆಗೆ ನಡೆಯಲಿದೆ. ಪ್ರಗತಿ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ಲೆದರ್ ಬಾಲ್ ಕ್ರಿಕೆಟ್ ತರಬೇತಿ ಪಡೆದಿದ್ದ ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಆಯೋಜಿಸಲಾಗಿದ್ದ ಅಂಡರ್ 14 ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಂಗಳೂರು ವಿಭಾಗ ತಂಡಕ್ಕೆ ಆಯ್ಕೆಯಾಗಿದ್ದರು.
ಶಟಲ್ ಬ್ಯಾಡ್ಮಿಂಟನ್ ತರಬೇತಿಯು ಏ.1 ರಿಂದ 30ರವರೆಗೆ ವಿರಾಜಪೇಟೆಯ ಜೂನಿಯರ್ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಶಟಲ್ ಬ್ಯಾಡ್ಮಿಂಟನ್ ತರಬೇತಿಯಲ್ಲಿ ಭಾಗವಹಿಸುವವರಿಗೆ 1000 ರೂ ತರಬೇತಿ ಶುಲ್ಕ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9380297168, 9080822944, 9448320838, 6364312028 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಗತಿ ಸ್ಪೋರ್ಟ್ಸ್ ಅಕಾಡೆಮಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.