



ಸುಂಟಿಕೊಪ್ಪ ಮಾ.25 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಲಕಾವೇರಿ ಜ್ಞಾನವಿಕಾಸ ಕೇಂದ್ರದ ವತಿಯಿಂದ ಸಂಘದ ಸದಸ್ಯರಿಗೆ ಮಾಹಿತಿ ಕಾರ್ಯಾಗಾರ ನಡೆಯಿತು. ಮಂಜಿಕೆರೆ ಸಮುದಾಯ ಭವನದಲ್ಲಿ ನಡೆದ ಸಮುದಾಯ ಆರೋಗ್ಯ ಇಲಾಖೆಯ ರೋಷಿತ್ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಎನಿಮಿಯ(ರಕ್ತಿಹೀನತೆ) ಖಾಲೆಯಿಂದ ಬಳಲುತ್ತಿರುವುದು ಹೆಚ್ಚಾಗಿ ಕಂಡು ಬರುತ್ತಿದೆ. ಹುಚ್ಚು ನಾಯಿ ಮತ್ತು ಸಾಕುನಾಯಿಗಳು ಕಚ್ಚುವುದು ಮತ್ತು ಆಕಸ್ಮಿಕವಾಗಿ ಹಲ್ಲು ತಗುಲಿ ಗಾಯ, ಉಗುರಿನಿಂದ ಪರಿಚಿದಾಗ ನಿರ್ಲಕ್ಷ್ಯತೆ ವಹಿಸದೆ ಕೂಡಲೇ ಆರೋಗ್ಯ ಕೇಂದ್ರಗಳಿಗೆ ತೆರಳಿ ಚುಚ್ಚುಮದ್ದುಗಳನ್ನು ಹಾಕಿಸಿಕೊಳ್ಳಬೇಕು ಇಲ್ಲದಿದ್ದರೆ ರೇಬಿಯಾಸ್ ಕಾಯಿಲೆಗೆ ತುತ್ತಾಗಿ ಮರಣ ಹೊಂದುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ ಎಂದು ಎಚ್ಚರಿಕೆ ನೀಡಿದರು. ಮಹಿಳೆಯರಲ್ಲಿ ಎನಿಮಿಯ ಸೇರಿದಂತೆ ಇತರೆ ಕಾಯಿಲೆಗಳಿಗೆ ಸಂಬಂಧಿಸಿದಂತೆ ಆರೋಗ್ಯ ತಪಾಸಣೆ ನಡೆಸುವ ಯೋಜನೆಯನ್ನು ರೂಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ನಡೆಸಲಾಗುವುದೆಂದು ಅವರು ಹೇಳಿದರು. ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಸೇವಾ ಪ್ರತಿನಿಧಿ ಪ್ರತಿಯೊಬ್ಬರು ಜಲವನ್ನು ಮಿತವಾಗಿ ಬಳಕೆ ಮಾಡುವ ಮೂಲಕ ಜಲವನ್ನು ಸಂರಕ್ಷಿಸಬೇಕಾಗಿದೆ. ಪ್ರತಿಯೊಂದು ಜೀವಿಗೂ ಜಲವು ಪ್ರಮುಖವಾಗಿದ್ದು, ಜಲವನ್ನು ಸಂರಕ್ಷಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು. ಕಾನ್‍ಬೈಲ್ ಶ್ರೀ.ಕ್ಷೇ.ಧ.ಗ್ರಾ.ಯೋ ತಲಕಾವೇರಿ ಜ್ಞಾನವಿಕಾಸ ಕೇಂದ್ರದ ಸದಸ್ಯೆ ಕಮಲ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಸಭೆಯಲ್ಲಿ ಕಾನ್‍ಬೈಲ್ ವ್ಯಾಪ್ತಿಯ ಸ್ವಸಹಾಯ ಸಂಘದ 50ಕ್ಕೂ ಮಿಕ್ಕ ಸದಸ್ಯರು ಪಾಲ್ಗೊಂಡಿದ್ದರು.