




ಮಡಿಕೇರಿ ಮಾ.26 NEWS DESK : ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕು ಅಧಿಕಾರಿಗಳ ಸಭೆಯು ಕೊಡಗು ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಚಿವರು ಹಾಗೂ ಶಾಸಕರು ತಾಲ್ಲೂಕು ಮಟ್ಟದ ಅಧಿಕಾರಿಗಳಿಂದ ವರದಿಯನ್ನು ಪಡೆದರು ಹಾಗೂ ಪ್ರಗತಿ ಪರಿಶೀಲನೆ ನಡೆಸಿದರು. ಇಲಾಖೆಗಳಲ್ಲಿಯ ಕೆಲಸಗಳನ್ನು ಮತ್ತಷ್ಟು ಚುರುಕುಗೊಳಿಸುವಂತೆ ಸಲಹೆ ನೀಡಿದರು. ಮಾನವ-ಪ್ರಾಣಿ ಸಂಘರ್ಷ ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಹಣ ಮೀಸಲಿಟ್ಟಿದ್ದು, ಜನರ ಸುರಕ್ಷತೆಯ ಬಗ್ಗೆಯೂ ಗಮನಹರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೆಲವು ಇಲಾಖೆಗಳ ನೂನ್ಯತೆಗಳನ್ನು ಗಮನಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಜನಸಾಮಾನ್ಯರಿಗೆ ಅನುಕೂಲ ಆಗುವಂತೆ ಕಾರ್ಯನಿರ್ವಹಿಸದೇ ಇದ್ದಲ್ಲಿ ಕಠಿಣ ಕ್ರಮ ಎದುರಿಸಬೇಕಾಗಬಹುದು ಎಂಬ ಎಚ್ಚರಿಕೆಯನ್ನು ನೀಡಿದರು. ಈ ಸಂದರ್ಭ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ವಿರಾಜಪೇಟೆ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಪಿ.ವಿ.ಜಾನ್ಸನ್, ಅಧಿಕಾರಿಗಳು ಹಾಗೂ ಪ್ರಮುಖರು ಹಾಜರಿದ್ದರು.