




ಮಡಿಕೇರಿ ಮಾ.27 NEWS DESK : ಇತಿಹಾಸ ಪ್ರಸಿದ್ಧ ಕಲ್ಲುಗುಂಡಿಯ ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲವು ಪ್ರತಿವರ್ಷದಂತೆ ಈ ಬಾರಿ ಕೂಡ ಮಾ.28 ಮತ್ತು 29ರಂದು ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಜರುಗಲಿದೆ. ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲ ಮತ್ತು ಪಂಜುರ್ಲಿ, ಕಲ್ಲುರ್ಟಿ, ಗುಳಿಗ ಹಾಗೂ ರಕ್ತೇಶ್ವರಿ ದೈವಗಳ ಸಮ್ಮಾನ ಕಾರ್ಯಕ್ರಮ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯ ಸಮಿತಿ ಕೋರಿದೆ.