




ಮಡಿಕೇರಿ ಮಾ.27 NEWS DESK : ತೂಚಮಕೇರಿ ಗ್ರಾಮದ ಆರಾಧ್ಯ ದೈವ ಶ್ರೀ ಮಹಾದೇವರ ಉತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿತು. ಅರ್ಚಕರಾದ ಶ್ರೀಕಂಠ ಭಟ್ ನೇತೃತ್ವದಲ್ಲಿ ಬ್ರಹ್ಮವಾಹಕರಾದ ಜಯಚಂದ್ರ ಉತ್ಸವ ನೆರವೇರಿಸಿದರು. ಜಿಲ್ಲೆಯ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದ ಆಡಳಿತ ಮ0ಡಳಿ ಸದ್ಯಸರು, ಊರಿನಾ ತಕ್ಕ ಮುಖ್ಯಸ್ಥರು ಹಾಜರಿದ್ದರು.