Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆಗೆ ಎಲ್ಲರೂ ಭಾಗವಹಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆಗೆ ಎಲ್ಲರೂ ಭಾಗವಹಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ*

ಮಾರ್ಚ್ 27, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.27 NEWS DESK : ಇದೇ ಏ.5 ರಂದು ಹಸಿರುಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ 118 ನೇ ಮತ್ತು ಏ.14 ರಂದು ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯನ್ನು ನಗರದ ಗಾಂಧಿ ಭವನದಲ್ಲಿ ಆಚರಿಸಲು ನಿರ್ಧರಿಸಲಾಯಿತು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆಗೆ ಎಲ್ಲರೂ ತೊಡಗಿಸಿಕೊಂಡು ಕಾರ್ಯಕ್ರಮ ಯಶಸ್ಸಿಗೆ ಕೈಜೋಡಿಸುವಂತೆ ಕೋರಿದರು. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ ರಾಂ ಅವರು ಒಂದು ಸಮಾಜ ಅಥವಾ ಸಮುದಾಯಕ್ಕೆ ಸೀಮಿತವಲ್ಲ. ಅವರು ರಾಷ್ಟ್ರಕ್ಕೆ ನೀಡಿರುವ ಕೊಡುಗೆಯನ್ನು ಸದಾ ಸ್ಮರಿಸುವಂತಾಗಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಪಾಲ್ಗೊಳ್ಳುವಂತಾಗಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸುವುದು. ನೀಟ್, ಸಿಇಟಿ ಹಾಗೆಯೇ ನಾಗರಿಕ ಸೇವೆ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸುವಂತಾಗಬೇಕು. ಇದರಿಂದ ಇತರರಿಗೂ ಪ್ರೇರಣೆಯಾಗಲಿದೆ ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು. ಇಬ್ಬರು ಮಹನೀಯರ ಜೀವನ ಸಂದೇಶವನ್ನು ತಿಳಿದುಕೊಳ್ಳುವಂತಾಗಬೇಕು. ಜೊತೆಗೆ ಸಮಾಜ ಕಲ್ಯಾಣ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ, ಸೌಲಭ್ಯಗಳನ್ನು ವಿತರಿಸುವಂತಾಗಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಸದಸ್ಯರಾದ ಎಸ್.ಸಿ.ಸತೀಶ್, ವಿವಿಧ ಸಮಾಜದ ಪ್ರಮುಖರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವಂತಾಗಬೇಕು ಎಂದು ಕೋರಿದರು. ಪ್ರಮುಖರಾದ ಮೋಹನ್ ಮೌರ್ಯ ಮಾತನಾಡಿ ‘ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು’ ಕಲ್ಪಿಸಿದ ಇಬ್ಬರು ಮಹಾನ್ ಸಾಧಕರ ಬಗ್ಗೆ ಪ್ರತಿಯೊಬ್ಬರಿಗೂ ಮಾಹಿತಿ ನೀಡುವಂತಾಗಬೇಕು. ಹಾಗೆಯೇ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯವರನ್ನು ಸಹ ಆಹ್ವಾನಿಸಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಸದಸ್ಯರಾದ ಪಿ.ಪಿ.ಸುಕುಮಾರ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆಯಂದು ಮೆರವಣಿಗೆ ಏರ್ಪಡಿಸುವಂತಾಗಬೇಕು, ಜೊತೆಗೆ ಕಲಾತಂಡ ಆಹ್ವಾನಿಸಬೇಕು ಎಂದು ಕೋರಿದರು. ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾದ ದಿವಾಕರ ಅವರು ಮಾತನಾಡಿ ಇಬ್ಬರು ಮಹಾನ್ ನಾಯಕರ ಜನ್ಮ ವರ್ಷಾಚರಣೆ ಸಂದರ್ಭದಲ್ಲಿ ಅನಾಥ ಆಶ್ರಮಗಳಿಗೆ ಅಗತ್ಯ ಸಹಕಾರ ನೀಡುವಂತಾಗಬೇಕು ಎಂದು ಕೋರಿದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು 2023 ಮತ್ತು 2024 ರಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಹಿನ್ನೆಲೆ ಸರಳವಾಗಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗಿತ್ತು, ಈ ವರ್ಷ ಸರ್ಕಾರದ ನಿರ್ದೇಶನದಂತೆ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಮಾಹಿತಿ ನೀಡಿದರು. ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಸಮಿತಿ ಸದಸ್ಯರಾದ ನಾಗರಾಜ ಶೆಟ್ಟಿ, ಗಣೇಶ್, ಪ್ರೇಮಕುಮಾರ್, ವೇಣುಕುಮಾರ್, ಪೌರಾಯುಕ್ತರಾದ ಎಚ್.ಆರ್.ರಮೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಿ.ಪಿ.ಕವಿತ, ಜಿಲ್ಲಾ ವಿಕಲಚೇತನರ ಅಧಿಕಾರಿ ವಿಮಲ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗಾಯತ್ರಿ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಬಾಲಕೃಷ್ಣ ರೈ, ಐಟಿಡಿಪಿ ಇಲಾಖೆಯ ವ್ಯವಸ್ಥಾಪಕರಾದ ದೇವರಾಜ್, ಕಾರ್ಮಿಕ ಇಲಾಖೆಯ ಶೀರಜ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 9 NEWS DESK : ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಮಡಿಕೇರಿ ಸಹಕಾರ ತರಬೇತಿ ಸಂಸ್ಥೆಯ…

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026

*ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.