



ಮಡಿಕೇರಿ NEWS DESK ಮಾ.28 : ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ ‘ಮುದ್ದಂಡ ಕಪ್ ಹಾಕಿ ಉತ್ಸವ’ ಇಂದು ಮಡಿಕೇರಿಯಲ್ಲಿ ಅದ್ದೂರಿಯಾಗಿ ಉದ್ಘಾಟನೆಗೊಂಡಿತು.
ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರು, ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡAಡ ಬೋಪಣ್ಣ ಅವರು ಬೆಳ್ಳಿಯ ಸ್ಟಿಕ್ ನಿಂದ ಬೆಳ್ಳಿಯ ಚೆಂಡನ್ನು ತಳ್ಳುವ ಮೂಲಕ ‘ಮುದ್ದಂಡ ಕಪ್ ಹಾಕಿ ಉತ್ಸವ’ ವನ್ನು ಉದ್ಘಾಟಿಸಿದರು. ಒಲಂಪಿಯನ್ ಎ.ಬಿ.ಸುಬ್ಬಯ್ಯ ಅವರು ಕ್ರೀಡಾಜ್ಯೋತಿ ಬೆಳಗಿದರು. ಇದಕ್ಕೂ ಮೊದಲು ಜನರಲ್ ತಿಮ್ಮಯ್ಯ ವೃತ್ತದಿಂದ ಕ್ರೀಡಾಜ್ಯೋತಿಯನ್ನು ಮೆರವಣಿಗೆ ಮೂಲಕ ಮೈದಾನಕ್ಕೆ ತರಲಾಯಿತು. ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿದ್ದ ಕೊಡವರು ಮೆರವಣಿಗೆಗೆ ಮೆರುಗು ನೀಡಿದರು. ಧ್ವಜಾರೋಹಣದ ನಂತರ ನಡೆದ ಸಭಾ ಕಾರ್ಯಕ್ರಮವನ್ನು ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಇದೇ ಸಂದರ್ಭ ಗಣ್ಯರು ಹಾಕಿ ಉತ್ಸವದ ಸ್ಮರಣ ಸಂಚಿಕೆಯನ್ನು ಕೂಡ ಬಿಡುಗಡೆ ಮಾಡಿದರು. ಮೈಸೂರು, ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ, ಮುದ್ದಂಡ ಒಕ್ಕದ ಅಧ್ಯಕ್ಷ ಮುದ್ದಂಡ ಬಿ.ದೇವಯ್ಯ, ಕಾರ್ಯದರ್ಶಿ ಮುದ್ದಂಡ ರಾಯ್ ತಮ್ಮಯ್ಯ, ಮುದ್ದಂಡ ಹಾಕಿ ಉತ್ಸವದ ಅಧ್ಯಕ್ಷ ರಶಿನ್ ಸುಬ್ಬಯ್ಯ, ಉಪಾಧ್ಯಕ್ಷ ಮುದ್ದಂಡ ಡೀನ್ ಬೋಪಣ್ಣ, ಕಾರ್ಯದರ್ಶಿ ಆದ್ಯ ಪೂವಣ್ಣ, ಕೊಡವ ಹಾಕಿ ಅಕಾಡೆಮಿಯ ಕಾರ್ಯಾಧ್ಯಕ್ಷ ಮೇಕೇರಿರ ರವಿ ಪೆಮ್ಮಯ್ಯ, ಉಪಾಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ಈ ಬಾರಿ ದಾಖಲೆಯ 396 ಕೊಡವ ಕುಟುಂಬ ತಂಡಗಳು ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುತ್ತಿದ್ದು, ಒಂದು ತಿಂಗಳ ಕಾಲ ಹಾಕಿ ಉತ್ಸವ ನಡೆಯಲಿದೆ.