
ಮಡಿಕೇರಿ ಮಾ.29 NEWS DESK : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ 2024-25ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡಲಾಯಿತು. ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲೆ ಎಂ.ಜಿ.ಸವಿತ ಹಾಗೂ ಆಡಳಿತ ಅಧಿಕಾರಿ ಎನ್.ಎ.ಪೊನ್ನಮ್ಮ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ನೆನಪಿನ ಕಾಣಿಕೆಯನ್ನು ವಿತರಿಸಿದರು. ಇದೇ ಸಂದರ್ಭ ವಿದ್ಯಾರ್ಥಿಗಳು ತಮ್ಮ ಅನುಭವವನ್ನು ಹಂಚಿಕೊಂಡರು. ಮುಖ್ಯ ಅತಿಥಿಗಳಾಗಿ ಶಾಲಾ ಆಡಳಿತ ಅಧಿಕಾರಿ ಎನ್.ಎ.ಪೊನ್ನಮ್ಮ ಪಾಲ್ಗೊಂಡಿದ್ದರು. 9ನೇ ತರಗತಿ ವಿದ್ಯಾರ್ಥಿನಿ ಟಿ.ಪಿ.ನಿಧಿ ಪ್ರಾರ್ಥಿಸಿದರು. ಹತ್ತನೇ ತರಗತಿ ವಿದ್ಯಾರ್ಥಿನಿ ಲಿಷ್ಮಾ ಹಾಗೂ ಪುಣ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ತರುಣ್ ವಂದಸಿದರು.









