

































ಮಡಿಕೇರಿ ಮಾ.31 NEWS DESK : ಕೊಡಗು ಮೈಸೂರು ಸಂಸದ ಯದುವೀರ್ ಒಡೆಯರ್ ಅವರು ವಿರಾಜಪೇಟೆ ತಾಲೂಕಿನ ಬೇಟೊಳಿ ಗ್ರಾಮದ ಚಿಟ್ಟಡೆ ಸರ್ಕಾರಿ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿˌ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಿದರು. ನಂತರ ಮಾತನಾಡಿದ ಅವರು ಕೇಂದ್ರ ಸರ್ಕಾರದ ಹಲವಾರು ಗ್ರಾಮ ಕಲ್ಯಾಣ ಯೋಜನೆಗಳ ಮೂಲಕ ಜಿಲ್ಲೆಯಾದ್ಯಂತ ಮೂಲಭೂತ ಸೌಕರ್ಯಗಳ ಸಮಸ್ಯೆಗಳಿಗೆ ಶಾಶ್ವತ ಪರಾಹಾರ ನೀಡುವುದಾಗಿ ಭರವಸೆ ನೀಡಿದರು.