
































ಮಡಿಕೇರಿ ಮಾ.31 NEWS DESK : ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿಯ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯು ನಡೆಯಿತು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರ ಜೊತೆಗೂಡಿ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಯುವನಿಧಿಯ 2023-24ರ ವಿಶೇಷ ನೋಂದಣಿ ಅಭಿಯಾನ ನಡೆಸಲಾಯಿತು. ಈ ಸಂದರ್ಭ ಪ್ರಾಂಶುಪಾಲರು ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್ ಮಾತನಾಡಿ ಯುವನಿಧಿ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಿಶೇಷ ನೋಂದಣಿ ಅಭಿಯಾನದ ಮಹತ್ವ ಮತ್ತು ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅರ್ಹತೆಗಳ ಬಗ್ಗೆ ಉಪಯುಕ್ತ ಮಾಹಿತಿ ನೀಡಿದರು.