




ಮಡಿಕೇರಿ ಏ.1 NEWS DESK : ಸೋಮವಾರಪೇಟೆ ಬಸವೇಶ್ವರ ರಸ್ತೆ ನಿವಾಸಿ ದೇಶ್ಮುಖ್ (ಪುಟ್ಟಣ್ಣ) ಹಾಸನದ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರ ಅಂತ್ಯಕ್ರಿಯೆ ಕರ್ಕಳ್ಳಿಯಲ್ಲಿರುವ ವೀರಶೈವ ರುದ್ರಭೂಮಿಯಲ್ಲಿ ನಡೆಯಲಿದೆ. ಮೃತರು ಪತ್ನಿ ಭಗವತಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು, ಬಳಗವನ್ನಗಲಿದ್ದಾರೆ. 90 ದಶಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಬಿಜೆಪಿ ಯ ಸಕ್ರೀಯ ಕಾರ್ಯಕರ್ತರಾಗಿದ್ದ ಇವರು ಸೋಮವಾರಪೇಟೆ ವೀರಶೈವ ಸಮಾಜದ ನಿರ್ದೇಶಕರಾಗಿ ಸೇವೆಸಲ್ಲಿಸಿದ್ದರು.