





ಮಡಿಕೇರಿ ಏ.2 NEWS DESK : ಭಾರತೀಯ ಜನತಾ ಪಾರ್ಟಿ ಎಸ್.ಸಿ ಮೋರ್ಚಾದಿಂದ ಮಡಿಕೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಏ.13 ರಂದು ವಿವಿಧ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಬಿಜೆಪಿ ಎಸ್‍ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ ತಿಳಿಸಿದ್ದಾರೆ. ದೇಶಕ್ಕೆ ಮಹತ್ತರವಾದ ಕೊಡುಗೆ ನೀಡಿರುವ ರಾಷ್ಟ್ರ ನಾಯಕರ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಸಲುವಾಗಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದ್ದು, ಅಂದು ಬೆಳಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ 1 ಗಂಟೆಯ ಕಾಲ ಸ್ಪರ್ಧೆ ನಡೆಯಲಿದೆ. 5 ರಿಂದ 7 ತರಗತಿ ವಿದ್ಯಾರ್ಥಿಗಳಿಗೆ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಕುರಿತು, 8 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಕುರಿತು, 8 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಕುರಿತು ಪ್ರಬಂಧ ಸ್ಪರ್ಧೆ ನಡೆಯಲಿದ್ದು, ಪ್ರಥಮ ಬಹುಮಾನ 2000 ನಗದು, ಆಕರ್ಷಕ ಟ್ರೋಫಿ ಹಾಗೂ ಪ್ರಶಾಂಸನಾ ಪತ್ರ, ದ್ವಿತೀಯ 1,000 ನಗದು, ಟ್ರೋಫಿ ಹಾಗೂ ಪ್ರಶಾಂಸನಾ ಪತ್ರ ನೀಡಲಾಗುವುದು. ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅಟಲ್ ಬಿಹಾರಿ ವಾಜಪೇಯಿ, ಪದವೀಧರ ವಿದ್ಯಾರ್ಥಿಗಳಿಗೆ ರಾಷ್ಟ್ರ ನಿರ್ಮಾಣದಲ್ಲಿ ಯುವ ಜನರ ಪಾತ್ರ ಕುರಿತು ಪ್ರಬಂಧ ಸ್ಪರ್ಧೆ ನಡೆಯಲಿದ್ದು, ಪ್ರಥಮ 3000 ನಗದು, ಆಕರ್ಷಕ ಟ್ರೋಫಿ ಹಾಗೂ ಪ್ರಶಾಂಸನಾ ಪತ್ರ, ದ್ವಿತೀಯ ಬಹುಮಾನ 2000 ನಗದು, ಟ್ರೋಫಿ ಹಾಗೂ ಪ್ರಶಾಂಸನ ಪತ್ರ ನೀಡಲಾಗುವುದು. ಅಲ್ಲದೇ ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಾಂಸನಾ ಪತ್ರ ನೀಡಲಾಗುವುದು. ಪ್ರಬಂಧ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಪೆನ್ನು ಮತ್ತು ಹಾಳೆಯನ್ನು ಸ್ಪರ್ಧೆ ನಡೆಯುವ ಸ್ಥಳದಲ್ಲೇ ನೀಡಲಾಗುವುದು. ವಿದ್ಯಾರ್ಥಿಗಳು ಕಾರ್‍ಬೊರ್ಡ್ ತರತಕ್ಕದ್ದು. ಪ್ರಬಂಧಗಳು ಎರಡು ಪುಲ್‍ಸ್ಕೆಪ್ ಹಾಳೆಯ ಒಳಗೆ ಇರತಕ್ಕದ್ದು, ಭಾಗವಹಿಸಲು ಇಚ್ಚಿಸುವ ವಿದ್ಯಾರ್ಥಿಗಳು ಏ.10ರ ಒಳಗೆ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಪಿ.ಎಂ.ರವಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಪಿ.ಎಂ.ರವಿ 9972073295, ಪಿ.ಕೆ.ಚಂದ್ರು 9740135257, ಹೀರಾ ಸುಬ್ಬಯ್ಯ 9972073295 ಸಂಪರ್ಕಿಸಬಹುದಾಗಿದೆ.