





ಸುಂಟಿಕೊಪ್ಪ ಏ.2 NEWS DESK : ವೊಲ್ ವೊ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಚಾಲಕರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ಸುಂಟಿಕೊಪ್ಪ ಸಮೀಪದ ಕೆದಕಲ್ ವ್ಯಾಪ್ತಿಯ 7ನೇ ಮೈಲ್ ತಿರುವಿನಲ್ಲಿ ನಡೆದಿದೆ. ಸುಂಟಿಕೊಪ್ಪ ಮೂಲಕ ಮಂಗಳೂರಿಗೆ ತೆರಳುತ್ತಿದ್ದ ವೊಲ್‍ವೊ ಬಸ್ ಮತ್ತು ಮಡಿಕೇರಿಯಿಂದ ಸುಂಟಿಕೊಪ್ಪದ ಕಡೆಗೆ ಆಗಮಿಸುತ್ತಿದ್ದ ಲಾರಿ ನಡುವೆ ಡಿಕ್ಕಿ ಸಂಭವಿಸಿತು. ಬಸ್ ಚಾಲಕ ಶಿವಾನಂದ ಹಾಗೂ ಲಾರಿ ಚಾಲಕ ಪ್ರತಾಪ್ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಅದೃಷ್ಟವಶಾತ್ ಯಾವುದೇ ರೀತಿಯ ನೋವುಗಳು ಸಂಭವಿಸಿಲ್ಲ. ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಜಗದೀಶ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.