










ಸೋಮವಾರಪೇಟೆ ಏ.4 NEWS DESK : ನೇರುಗಳಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ದಾನಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ 7ನೇ ತರಗತಿಯ ವ್ಯಾಸಂಗ ಪೂರೈಸಿದ ವಿದ್ಯಾರ್ಥಿಗಳಿಗೆ ಶಾಲಾಡಳಿತ ಮಂಡಳಿ ಹಾಗೂ ಶಿಕ್ಷಕ ವರ್ಗದಿಂದ ಬೀಳ್ಕೊಡಲಾಯಿತು. ಶಾಲೆಯ ಪ್ರಗತಿಗೆ ಸಹಕಾರ ನೀಡುತ್ತಿರುವ ದಾನಿಗಳಾದ ಅರೆಯೂರಿನ ಕೆ.ಎನ್. ಪಾಪಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪಾಪಯ್ಯ, ಗ್ರಾಮೀಣ ಶಾಲೆಯಲ್ಲೂ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಶಿಕ್ಷಕರು ಕೂಡ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ ನೀಡುತ್ತಿದ್ದಾರೆ. ಸರ್ಕಾರಿ ಶಾಲೆಗಳು ಅಭಿವೃದ್ಧಿಗೆ ದಾನಿಗಳ ಸಹಕಾರ ಅವಶ್ಯಕತೆಯಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿಲೀಪ್, ಉಪಾಧ್ಯಕ್ಷೆ ದೇಚಮ್ಮ, ನವೀನ್‍ಕುಮಾರ್, ಶಂಷುದ್ದೀನ್, ರಮೇಶ್, ಚೇತನ್, ಮುಖ್ಯ ಶಿಕ್ಷಕಿ ಎಸ್ತೆಲಾ ಡಿಸಿಲ್ವಾ, ಶಿಕ್ಷಕರಾದ ರಮೇಶ್, ಶಶಿಕಲಾ, ಗಣೇಶ್, ಹೇಮಲತಾ, ಪೋಷಕರು ಇದ್ದರು.