



ಮಡಿಕೇರಿ NEWS DESK ಏ.4 : ಕೊಡಗಿನ ಬಿಜೆಪಿ ಕಾರ್ಯಕರ್ತ ಸೋಮವಾರಪೇಟೆಯ ಗೋಣಿಮರೂರು ಮೂಲದ ವಿನಯ್ ಸೋಮಯ್ಯ(39) ಎಂಬುವವರು ಬೆಂಗಳೂರಿನ ನಾಗವಾರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮೊದಲು ವಿನಯ್ ಡೆತ್ ನೋಟ್ ಬರೆದಿಟ್ಟಿದ್ದು, ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಮುಖರೊಬ್ಬರ ಹೆಸರನ್ನು ಉಲ್ಲೇಖಿಸಿ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ವಿನಾಕಾರಣ ನನ್ನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದ್ದು, ಇದರಿಂದ ಮನನೊಂದಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮೃತ ವಿನಯ್ ಸೋಮಯ್ಯ ಅವರು ತಾಯಿ, ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಕೊಡಗು ಜಿಲ್ಲಾ ಬಿಜೆಪಿ ಆತ್ಮಹತ್ಯೆಗೆ ಕಾರಣಕರ್ತರಾದವರನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದೆ.