





ಮಡಿಕೇರಿ ಏ.5 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲ್ಲೂಕು ಬಿರುನಾಣಿ ಗ್ರಾ.ಪಂ ಗೆ ಶಾಸಕರ ಅನುದಾನದಲ್ಲಿ ಮಂಜೂರಾದ ನೂತನ ಪಂಚಾಯಿತಿ ಕಟ್ಟಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಗ್ರಾಮ ಪಂಚಾಯಿತಿಯು ಜನಸಾಮಾನ್ಯರಿಗೆ ನೀಡುವ ಮೊದಲ ಆಡಳಿತದ ತಾಣವಾಗಿದ್ದು, ಆಯ್ಕೆಯಾದ ಪ್ರತಿಯೊಬ್ಬ ಜನಪ್ರತಿನಿಧಿಯು ಭದ್ರತೆಯಿಂದ ಕೆಲಸ ಮಾಡಿದರೆ ದೇಶ ಏಳಿಗೆ ಕಾಣುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು. ನೂತನ ಕಟ್ಟಡದ ವಿನ್ಯಾಸ ಹಾಗೂ ಕಾಮಗಾರಿಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ಶಾಸಕರು, ಈ ನೂತನ ಕಟ್ಟಡದಲ್ಲಿ ಆಡಳಿತವು ಜನಸಾಮಾನ್ಯರ ಪರವಾಗಿ ಇರಲಿ ಎಂದು ಶುಭ ಹಾರೈಸಿದರು. ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಪ್ರಶಾಂತ್ ,ಪೊನ್ನಂಪೇಟೆ ತಾಲ್ಲೂಕು ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ಲಾಲ ಅಪ್ಪಣ್ಣ ,ಬಿರುನಾಣಿ ವಲಯ ಅಧ್ಯಕ್ಷ ಪ್ರೀತಮ್, ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು, ಸ್ಥಳೀಯರು, ಪ್ರಮುಖರು ಉಪಸ್ಥಿತರಿದ್ದರು.