





ಮಡಿಕೇರಿ NEWS DESK ಏ.6 : ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮತ್ತು ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಏ.9ರಂದು ಮಡಿಕೇರಿಯಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ. ಬುಧವಾರ ಬೆಳಿಗ್ಗೆ 10.30 ಗಂಟೆಗೆ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರತಿಭಟನಾ ಮೆರವಣಿಗೆ ಆರಂಭಿಸಲಾಗುವುದು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ , ಮುಖಂಡರಾದ ಸಿ.ಟಿ.ರವಿ, ಆರ್.ಅಶೋಕ್, ಸಂಸದ ಯದುವೀರ್ ಒಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಕೊಡಗು ಬಿಜೆಪಿ ಮಾಹಿತಿ ನೀಡಿದೆ.