






ಮಡಿಕೇರಿ ಏ.7 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಸಿದ್ದಾಪುರ ಕರಡಿಗೋಡು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಬಸವೇಶ್ವರ ದೇವರ ಜಾತ್ರೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಸ್ಥಾನದ ಆಡಳಿತದವರೊಂದಿಗೆ ಮಾತನಾಡಿದ ಶಾಸಕರು ಮುಂದಿನ ದಿನಗಳಲ್ಲಿ ಶ್ರೀ ದೇವರ ಸನ್ನಿಧಿಗೆ ಬೇಕಾದಂತಹ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುವುದಾಗಿ ಇದೇ ಸಂದರ್ಭದಲ್ಲಿ ಭರವಸೆ ನೀಡಿದರು. ಈ ಸಂದರ್ಭ ಸಿದ್ದಾಪುರ ವಲಯ ಅಧ್ಯಕ್ಷರಾದ ಪ್ರತೀಶ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.