






ಮಡಿಕೇರಿ ಏ.8 NEWS DESK : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಂತರಿಕ ಗುಣಮಟ್ಟ ಭರವಸೆ ಕೋಶ, ಅರ್ಥಶಾಸ್ತ್ರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ “ಯುವ ಜನತೆಗೆ ಸಹಕಾರಿ ಕ್ಷೇತ್ರದ ಅರಿವು” ನಡೆಯಿತು. ಕಾಲೃಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ದಯಾನಂದ.ಕೆ.ಸಿ ಉದ್ಘಾಟಿಸಿ ಮಾತನಾಡಿ, ಸಹಕಾರಿ ಕ್ಷೇತ್ರ ಬಹಳ ಮುಖ್ಯವಾದ ಒಂದು ಆರ್ಥಿಕ ಕ್ಷೇತ್ರವಾಗಿದೆ. ಭಾರತದಲ್ಲಿ ಸಹಕಾರಿ ಕ್ಷೇತ್ರ ಬಹಳ ಆಳವಾಗಿ ಬೆಳೆದಿದೆ. ಜಗತ್ತಿನ ಎಲ್ಲಾ ರಾಷ್ಟ್ರಗಳು ಆರ್ಥಿಕ ಹಿಂಜರಿಕೆಯಿಂದ ಸಂಕಷ್ಟ ಅನುಭವಿಸಿದರೂ, ಸಹಕಾರಿ ಕ್ಷೇತ್ರ ಬಹಳ ಪ್ರಬಲವಾಗಿರುವುದರಿಂದ ಅದರ ಪರಿಣಾಮ ಭಾರತದ ಮೇಲೆ ಅಷ್ಟೊಂದು ಉಂಟಾಗಲಿಲ್ಲ ಎಂದು ಹೇಳಿದರು. ಕೊಡಗು ಜಿಲ್ಲಾ ಸಹಕಾರಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಡಾ.ರೇಣುಕಾ ಆರ್.ಎಸ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, ಸಹಕಾರಿ ಕ್ಷೇತ್ರದ ಮೂಲ ತತ್ವಗಳು, ಸಹಕಾರಿ ಸಂಘಗಳ ಕಾರ್ಯ ಚಟುವಟಿಕೆ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಹಕಾರಿ ವಿಷಯದ ಮಹತ್ವ ಮತ್ತು ಸಹಕಾರಿ ಕ್ಷೇತ್ರದಲ್ಲಿ ಅವಕಾಶವಿರುವ ವಿವಿಧ ಉದ್ಯೋಗ ಅವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು. ಕಾರ್ಯಕ್ರಮದಲ್ಲ್ಲಿ ಸಹಕಾರಿ ತರಬೇತಿ ಸಂಸ್ಥೆಯ ಉಪನ್ಯಾಸಕ ಸಂಜೀವ, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹ ಸಂಚಾಲಕ ಡಾ.ಬಸವರಾಜು, ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ದಮಯಂತಿ.ಪಿ.ಟಿ, ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ವೀಣಾ ಕೆ.ಎಂ, ಗೀತಾ ಬಿ.ವಿ ಹಾಗೂ ಕಾಲೇಜಿನ ಎಲ್ಲಾ ಅಧ್ಯಾಪಕ ಮತ್ತು ಅಧ್ಯಾಪಕರೇತರ ಹಾಗೂ ವಿದ್ಯಾರ್ಥಿಗಳು ಇದ್ದರು. ನಿಶಾನ್ ಜೋಷೆಪ್ ನಿರ್ವಹಣೆ ಮಾಡಿದರು.