






ಮಡಿಕೇರಿ ಏ.8 NEWS DESK : ಪ್ರಸಕ್ತ(2025-26) ಸಾಲಿಗೆ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಜಾತಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್, 15 ಪ್ರಾರಂಭದ ದಿನಾಂಕ, ಅರ್ಜಿಯನ್ನು ಆನ್ಲೈನ್ನಲ್ಲಿ ಸಲ್ಲಿಸಲು ಮೇ, 03 ಕೊನೆಯ ದಿನವಾಗಿದೆ. ಪ್ರವೇಶ ಪರೀಕ್ಷೆಯು ಮೇ, 09 ರಂದು ನಡೆಯಲಿದೆ. ಪ್ರವೇಶ ಪರೀಕ್ಷೆ ಫಲಿತಾಂಶ ಮೇ, 13 ರಂದು ಪ್ರಕಟವಾಗಲಿದೆ. ಮೇ, 17 ರಂದು ಅರ್ಹ ವಿದ್ಯಾರ್ಥಿಗಳನ್ನು ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡುವುದು. ಆಯ್ಕೆಯಾದ ಶಾಲೆಗೆ ದಾಖಲಾಗಲು ಮೇ, 31 ಕೊನೆಯ ದಿನವಾಗಿದೆ. ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ https://swd.karnataka.gov.in/ ಅನ್ನು ಬಳಸಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು 5ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಆಯ್ಕೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರತಿಷ್ಟಿತ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಅವಕಾಶವನ್ನು ಕಲ್ಪಿಸಲಾಗುತ್ತದೆ. ವಿದ್ಯಾರ್ಥಿಗಳಿಂದ ಜಾತಿ ದೃಢೀಕರಣ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ ಹಾಗೂ ಮುಖ್ಯೋಪಾಧ್ಯಾಯರಿಂದ ದೃಢೀಕೃತಗೊಂಡ ಅಂಕ ಪಟ್ಟಿಯನ್ನು ಸಲ್ಲಿಸುವುದು. ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ರೂ.2 ಲಕ್ಷ ಒಳಗೆ ಇರಬೇಕು.(ಈ ಬಗ್ಗೆ ತಹಶೀಲ್ದಾರರವರಿಂದ ಪಡೆದ ಆದಾಯ ಪ್ರಮಾಣ ಪತ್ರ ಸಲ್ಲಿಸುವುದು). ಅರ್ಜಿಯನ್ನು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ದೂ.ಸಂ.9480843037, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ 9480843155, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ 9480843156 ಹಾಗೂ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ ದೂ.ಸಂ.9480843157 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ತಿಳಿಸಿದ್ದಾರೆ.