






ನಾಪೋಕ್ಲು ಏ.8 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಕಿ ಅಕಾಡೆಮಿ ವತಿಯಿಂದ ಏ.10 ರಂದು ಹಾಕಿ ತರಬೇತಿ ಶಿಬಿರ ನಡೆಯಲಿದೆ. ಅಂದು ಬೆಳಿಗ್ಗೆ 6.30 ಗಂಟೆಗೆ ಕೆ.ಪಿ.ಎಸ್ ಶಾಲಾ ಮೈದಾನದಲ್ಲಿ ಶಿಬಿರ ಪ್ರಾರಂಭಗೊಳ್ಳಲಿದ್ದು, ನುರಿತ ತರಬೇತುದಾರರಾದ ಅಕಾಡೆಮಿಯ ಕಾರ್ಯದರ್ಶಿ, ನಿವೃತ ಸೈನಿಕ ಕೋಟೋಳಿರ ಡಾಲಿ ಅಪ್ಪಚ್ಚ ಹಾಗೂ ಅರೆಯಡ ಗಣೇಶ್ ಬೆಳ್ಳಿಯಪ್ಪ ಹಾಗೂ ಇನ್ನಿತರರು ತರಬೇತಿ ನಿರ್ವಹಿಸಲಿದ್ದಾರೆ. ಈ ಸಂದರ್ಭ ಶಿಬಿರಾರ್ಥಿಗಳಿಗೆ ಹಾಲು, ಮೊಟ್ಟೆ ಇನ್ನಿತರ ಸೌಲಭ್ಯಗಳಿದ್ದು, ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಅರ್ಹತಾ ಪತ್ರ ನೀಡಲಾಗುತ್ತದೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅಕಾಡೆಮಿ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ : ದುಗ್ಗಳ ಸದಾನಂದ.