






ಸುಂಟಿಕೊಪ್ಪ ಏ.8 NEWS DESK : ಕೊಡಗರಹಳ್ಳಿಯ ಕುಂದೂರುಮೊಟ್ಟೆ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಶ್ರೀ ಮಹಾವಿಷ್ಣು, ಶ್ರೀ ಚಾಮುಂಡೇಶ್ವರಿ, ರಕ್ತೇಶ್ವರಿ ಪರಿವಾರ ದೇವರುಗಳ 47ನೇ ವಾರ್ಷಿಕ ಮಹೋತ್ಸವವು ಏ.21 ರಿಂದ 23 ರವರೆಗೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ. ಏ.21 ರಂದು ಪೂರ್ವಾಹ್ನ ಗಣಪತಿ ಹೋಮ ಮತ್ತು ಕೊಡಿ ಏರಿಸುವುದರೊಂದಿಗೆ ಪೂಜಾ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಸಂಜೆ 7 ಗಂಟೆಯಿಂದ ದೀಪರಾಧನೆ, ಏಳು ಸುತ್ತಿನ ಪ್ರದಕ್ಷಣೆ ಹಾಗೂ ಶ್ರೀ ಚಾಮುಂಡಿ ತಂಡದಿಂದ ಚಂಡೆ ಮೇಳ ಜರುಗಲಿದೆ. ಏ.22 ರಂದು ಶ್ರೀ ಚಾಮುಂಡೇಶ್ವರಿ ದೇವಿಯ ಅಭಿಷೇಕ ಪೂಜೆ ನಡೆಯಲಿದ್ದು, ರಾತ್ರಿಯಿಂದ ವಿವಿಧ ದೈವಗಳ ಕೋಲ ಜರುಗಲಿದೆ. ಏ.23 ರಂದು ಪೂರ್ವಾಹ್ನ ಅಜ್ಜಪ್ಪ ಕೋಲ ವಿಷ್ಣುಮೂರ್ತಿ ಕೋಲ, ರಕ್ತೇಶ್ವರಿ ಹಾಗೂ ಚಾಮುಂಡೇಶ್ವರಿ ಕೋಲ ನಡೆಯಲಿದ್ದು, ರಾತ್ರಿ 8 ಗಂಟೆಗೆ ಶ್ರೀ ದೇವಿ ನೇವೈದ್ಯದೊಂದಿಗೆ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ ಎಂದು ಶ್ರೀಕುಂದುರುಮೊಟ್ಟೆ ಚಾಮುಂಡೇಶ್ವರಿ ದೇವಾಲಯ ಸಮಿತಿ ತಿಳಿಸಿದೆ. ವಾರ್ಷಿಕ ಜಾತ್ರೆಗೆ ಪೂರ್ವಾಭಾವಿಯಾಗಿ ನೆಡೆಯುವ ಶ್ರೀ ಮುನೀಶ್ವರ ಸ್ವಾಮಿಯ ಆರಾಧನೆ ಏ.14 ರ ಸೋಮವಾರದಂದು ನಡೆಯಲಿದೆ.