






ಬೆಂಗಳೂರು ಏ.8 NEWS DESK : 2024-25ನೇ ಸಾಲಿನ ರಾಜ್ಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ಶೇ. 73.45 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪಉಡುಪಿ ಮೊದಲ ಸ್ಥಾನ ಪಡೆದಿದ್ದು, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. 6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ ಎಂದು ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶೇ. 93.90 ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನ ದಕ್ಷಿಣ ಕನ್ನಡ (ಶೇ. 93.57), ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(ಶೇ. 85.36) ಪಡೆದುಕೊಂಡಿದೆ. ಕೊನೆ ಸ್ಥಾನ ಯಾದಗಿರಿ (ಶೇ.73.45) ಪಡೆದುಕೊಂಡಿದೆ. ದ್ವಿತೀಯ ಪಿಯುಸಿ ಪರಿಕ್ಷೆ ಕಳೆದ ಮಾರ್ಚ್ 1 ರಿಂದ ಆರಂಭಗೊಂಡು ಮಾರ್ಚ್ 20 ರಂದು ಮುಕ್ತಾಯಗೊಂಡಿತ್ತು. ಈ ಬಾರಿ ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಉನ್ನತ ಶ್ರೇಣಿ- 1,00,571, ಪ್ರಥಮ ದರ್ಜೆ- 2,78,054, ದ್ವೀತಿಯ ದರ್ಜೆ-70969, ತೃತೀಯ ದರ್ಜೆ-18845 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. ಮಧ್ಯಾಹ್ನ 1:30 ಗಂಟೆಯ ನಂತರ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಕಲಾ ವಿಭಾಗದಲ್ಲಿ 53.29, ವಾಣಿಜ್ಯ ವಿಭಾಗದಲ್ಲಿ 76.07,ವಿಜ್ಞಾನ ವಿಭಾಗದಲ್ಲಿ 82.54 ಪ್ರತಿ ವರ್ಷದಂತೆ ಈ ವರ್ಷವೂ ವಿದ್ಯಾರ್ಥಿನಿಯರದ್ದೇ ಮೇಲುಗೈ ಸಾಧಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ. ಈಕೆ ದಕ್ಷಿಣ ಕನ್ನಡದ ಎಕ್ಸಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ.ಕಲಾ ವಿಭಾಗದಲ್ಲಿ ಸಂಜನಾ ಬಾಯಿ, ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಕಾಲೇಜಿನ ದೀಪಶ್ರೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ವೆಬ್ ಸೈಟ್ http//karresults.nic.in ನಲ್ಲಿ ಫಲಿತಾಂಶ ವಿವರ ನೋಡಬಹುದು.