






ಮಡಿಕೇರಿ ಏ.9 NEWS DESK : ಬೆಂಗಳೂರು ಸಮಾಜ ಕಲ್ಯಾಣ ಸಂಸ್ಥೆ ಹಾಗೂ ವಿಶ್ವ ಕನ್ನಡ ಜಾನಪದ ಪರಿಷತ್ ವತಿಯಿಂದ ಕೊಡಮಾಡುವ ವೀರ ವನಿತೆ ಅಕ್ಷರದ ಅವ್ವ ಮಹಿಳಾ ರಾಜ್ಯ ಪ್ರಶಸ್ತಿಗೆ ಎಂ.ಬಾಡಗ-1 ಅಂಗನವಾಡಿ ಕಾರ್ಯಕರ್ತೆ ಬಿ.ಬಿ.ಜಯಂತಿ ಭಜನರಾಗಿದ್ದಾರೆ. ಮಹಿಳಾ ದಿನಾಚರಣೆಯ ಸಲುವಾಗಿ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಮಹಿಳಾ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಬಿ.ಬಿ.ಜಯಂತಿ ಅವರಿಗೆ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.